ಹಾಸನ: ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಜನ ಜಾಗೃತಿ ಸಂಘಟನೆ ಚನ್ನರಾಯಪಟ್ಟಣ ಇಲ್ಲಿ 44ನೇ ರೈತ ಹುತಾತ್ಮರ ದಿನಾಚರಣೆಯನ್ನು ಆಚರಿಸಿದ್ದು ಸಾಧಕರಿಗೆ ವಿಶೇಷವಾಗಿ ಸನ್ಮಾನ ಮಾಡಲಾಯಿತು. ಹಾಸನ ನಗರದ ಬಹುಮುಖ ಪ್ರತಿಭೆ, ಸದಾ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುವಂತಹ ಸಾಹಿತಿ, ಶಿಕ್ಷಕಿ, ಸಾಮಾಜಿಕ ಚಿಂತಕಿ, ನಿರೂಪಕಿ, ಸಮಾಜ ಸೇವಕಿ, ಪತ್ರಕರ್ತೆ ಪ್ರತಿಮಾ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ"ದ ಸಂಸ್ಥಾಪಕ ಅಧ್ಯಕ್ಷರಾದ ಶ್ರೀಮತಿ ಹೆಚ್ಎಸ್ ಪ್ರತಿಮಾ ಹಾಸನ್ ರವರಿಗೆ ಮಹಿಳಾ ಸಾಧಕಿ ಎಂದು ಅತಿಥಿಯಾಗಿ ಆಹ್ವಾನಿಸಿ ಗೌರವಪೂರ್ಣವಾಗಿ ಸಿ.ಎ. ನಾಗರತ್ನ ರಾಜ್ಯ ಅಧ್ಯಕ್ಷರು ಸನ್ಮಾನಿಸಿದರು. ಮತ್ತು ಅವರ ಕಾರ್ಯವನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷರು ಕುಮಾರ್, ರಾಜ್ಯ ಕಾರ್ಯದರ್ಶಿಗಳು ಹರೀಶ್, ಶಂಕರ್, ಇನ್ನೂ ಹಲವರು ಜಿಲ್ಲಾ ತಾಲೂಕು ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ







