ಉಜಿರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳ್ತಂಗಡಿ ತಾಲೂಕು ಆರೋಗ್ಯ ಇಲಾಖೆ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ, ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಹಾಗೂ ಎಸ್.ಡಿ.ಎಂ. ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ (ಡಿ.ಎಡ್.) ಇವುಗಳ ಸಹಯೋಗದಲ್ಲಿ ‘ವಿಶ್ವ ಜನಸಂಖ್ಯಾ ದಿನಾಚರಣೆ’ಯು ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ನ ಸಭಾಂಗಣದಲ್ಲಿ ಇಂದು (ಜೂ.12) ನಡೆಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾ ಕಿರಣ್ ಅವರು, ಜನಸಂಖ್ಯೆ ಅಧಿಕವಾಗುತ್ತಿರುವುದರಿಂದ ಪರಿಸರ ನಾಶವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಅಲ್ಲದೆ, “ನಮ್ಮ ರಾಷ್ಟ್ರ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಇತ್ತೀಚೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ” ಎಂದರು.
ಮುಖ್ಯ ಅತಿಥಿ, ಎಸ್.ಡಿಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್., “ಸರಕಾರದ ಜೊತೆಗೆ ಅನೇಕ ಇಲಾಖಾ ಅಧಿಕಾರಿಗಳು ಸೇರಿ ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು, ಆರೋಗ್ಯವಂತ ಸಮಾಜ ನಿರ್ಮಾಣದ ಮೂಲಕ ದೇಶದ ಏಳಿಗೆಗೆ ಇನ್ನಷ್ಟು ಸಹಕಾರ ನೀಡಿದಂತಾಗುತ್ತದೆ. ಈ ಕಾರ್ಯಕ್ರಮದ ಮೂಲಕ ಯುವಜನತೆಗೆ ಅರಿವು ಮೂಡಿಸುತ್ತಿರುವುದು ಉತ್ತಮವಾದ ಕಾರ್ಯ. ಇಂತಹ ಕಾರ್ಯಕ್ರಮದಿಂದಾಗಿ ಭಾರತವು ಪ್ರಬಲ ರಾಷ್ಟ್ರವಾಗಿ ಮೂಡಿ ಬಂದಿದೆ” ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು, “ಜನಸಂಖ್ಯೆ ನಿಯಂತ್ರಣದಿಂದ ದೇಶ ಅಭಿವೃದ್ಧಿ ಹೊಂದುತ್ತದೆ. ಸಮಾಜದ ಆರೋಗ್ಯವನ್ನು ಕಾಪಾಡುವುದು ನಮ್ಮ ಕರ್ತವ್ಯ” ಎಂದರು.
ಇದೇ ಸಂದರ್ಭದಲ್ಲಿ ಡೆಂಗ್ಯೂ ನಿಯಂತ್ರಣ ಕುರಿತ ಭಿತ್ತಿಪತ್ರಿಕೆ ಅನಾವರಣಗೊಳಿಸಲಾಯಿತು. ಕಾರ್ಯಕ್ರಮದ ಕುರಿತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉತ್ತಮ ಕೇಂದ್ರ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ಉಜಿರೆ ಎಸ್.ಡಿ.ಎಂ. ಡಿ.ಎಡ್. ಪ್ರಾಂಶುಪಾಲ ಸ್ವಾಮಿ ಕೆ.ಎ., ತಾಲೂಕು ಆರೋಗ್ಯಾಧಿಕಾರಿ (ಪ್ರಭಾರ) ಡಾ. ಸೌಜನ್ಯಾ, ತಾಲೂಕು ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ರಶ್ಮಿ, ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ಉಜಿರೆ ಪ್ರಾ.ಆ. ಕೇಂದ್ರದ ವೈದ್ಯೆ ಡಾ. ಮಂಜು ಉಪಸ್ಥಿತರಿದ್ದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮ ವ್ಯವಸ್ಥಾಪಕ ಅಜಯ್ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಕುರಿತು ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಉಜಿರೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉತ್ತಮ ಕೇಂದ್ರ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.
ಡೆಂಗ್ಯು ನಿಯಂತ್ರಣ ಕುರಿತ ಭಿತ್ತಿಪತ್ರಿಕೆಯನ್ನು ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ದೀಪಾ ಪ್ರಭು ಮತ್ತು ಇತರ ಗಣ್ಯರು ಅನಾವರಣಗೊಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ