ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದ ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಸಿಂಚನಾ ಎಂ ಅವರು ಭಾರತೀಯ ಲೆಕ್ಕ ಪರಿಶೋಧನಾ ಮಂಡಳಿಯು (ಐಸಿಎಐ) ಮೇ 2024ರಲ್ಲಿ ನಡೆಸಿದ ಸಿ.ಎ. ಇಂಟರ್ ಗ್ರೂಪ್ ಪರೀಕ್ಷೆಯ ಗ್ರೂಪ್ 1 ಹಾಗೂ ಗ್ರೂಪ್ 2 ವಿಭಾಗದ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಂತಿಮ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಸಿಂಚನಾ ಅವರು ಸುಳ್ಯದ ಐವತ್ತೊಕ್ಲು ಗ್ರಾಮದ ದಿ.ಸೀತಾರಾಮ ಎಂ ಹಾಗೂ ಸರೋಜಾ ದಂಪತಿ ಪುತ್ರಿ. ಕಳೆದ ಕೆಲವು ವರ್ಷಗಳಿಂದ ಅಂಬಿಕಾ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯ ಗಳಲ್ಲಿ ಸಿಎ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಿ.ಎ ಆಕಾಂಕ್ಷಿ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಮಾರ್ಗದರ್ಶನ ದೊರೆಯುತ್ತಿದೆ. ವಿದ್ಯಾರ್ಥಿನಿಯ ಸಾಧನೆಗೆ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಪ್ರಾಂಶುಪಾಲ ರಾಕೇಶ ಕುಮಾರ್ ಕಮ್ಮಜೆ, ಬೋಧಕ - ಬೋಧಕೇತರ ವೃಂದದವರು ಅಭಿನಂದನೆ ಸಲಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ