ಮುಟ್ಟು ಸಹಜ ಪ್ರಕ್ರಿಯೆ, ಅದರಲ್ಲಿ ಮುಚ್ಚಿಡುವುದು ಏನೂ ಇಲ್ಲ: ಪ್ರಿಯಾಂಕಾ ಜಯದೇವ್

Upayuktha
0

 ಹದಿಹರೆಯದಲ್ಲಿ ಪಿಸಿಓಎಸ್ ಮತ್ತು ಮುಟ್ಟಿನ ದಿನಗಳಲ್ಲಿ ಶುಚಿತ್ವ


ಉಜಿರೆ:
ಮುಟ್ಟಾಗುವಿಕೆ ಎಂಬುವುದು ಒಂದು ಸಹಜ ಪ್ರಕ್ರಿಯೆ. ಅದರಲ್ಲಿ ನಾಚಿಕೆ ಪಡುವಂತಹದ್ದು, ಮುಚ್ಚಿಡುವಂತಹದ್ದು ಏನೂ ಇಲ್ಲ ಎಂದು ಉಜಿರೆಯ ಎಸ್.ಡಿ.ಎಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಪ್ರಿಯಾಂಕಾ ಜಯದೇವ್ ಹೇಳಿದರು.


ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ಮಹಿಳಾ ಅಭಿವೃದ್ಧಿ ಕೋಶ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಮತ್ತು ಸಾಮಾಜಿಕ ಜವಾಬ್ದಾರಿ ಉಪಕ್ರಮಗಳ ಸಮಿತಿ ಸಹಯೋಗದಲ್ಲಿ ‘ಹದಿಹರೆಯದಲ್ಲಿ ಪಿಸಿಓಎಸ್ ಮತ್ತು ಮುಟ್ಟಿನ ದಿನಗಳಲ್ಲಿ ಶುಚಿತ್ವ’ ಕುರಿತು ಜು.24ರಂದು ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.


ಹದಿಹರೆಯದಲ್ಲಿ ಮಹಿಳೆಯರನ್ನು ಕಾಡುವ ಪಾಲಿಸಿಸ್ಟಿಕ್ ಓವರಿಯನ್ ಸಿಂಡ್ರೋಮ್ (ಪಿಸಿಒಎಸ್) ಎಂಬ ಹಾರ್ಮೋನ್ ಸಂಬಂಧಿತ ಸಮಸ್ಯೆ ಹಾಗೂ ಅದರಿಂದ ಋತುಚಕ್ರದ ಮೇಲಾಗುವ ಪರಿಣಾಮ ಕುರಿತು ಅವರು ತಿಳಿಸಿದರು. ಮುಟ್ಟಿನ ಸಮಯದಲ್ಲಿ ಶುಚಿತ್ವದ ಪ್ರಾಮುಖ್ಯ ತಿಳಿಸಿದರು.  


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, ಮಾನಸಿಕ ಆರೋಗ್ಯ ಹಾಗೂ ದೈಹಿಕ ಆರೋಗ್ಯ ಎರಡೂ ಅತೀ ಅಗತ್ಯ ಎಂದರು. 


ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಯೋಜಕ ಶ್ರೇಯಸ್ ಬಿ., ಮಹಿಳಾ ಅಭಿವೃದ್ಧಿ ಕೋಶದ ಸಂಯೋಜಕಿ ಅಕ್ಷತಾ ಜೈನ್ ಮತ್ತು ಸಾಮಾಜಿಕ ಜವಾಬ್ದಾರಿ ಉಪಕ್ರಮಗಳ ಸಮಿತಿಯ ಸಂಯೋಜಕಿ ಪ್ರೊ. ದೀಪ ಆರ್.ಪಿ. ಉಪಸ್ಥಿತರಿದ್ದರು.ಅರುಂಧತಿ ಮತ್ತು ತಂಡದವರು ಪ್ರಾರ್ಥಿಸಿದರು. ಸ್ನೇಹ ಸ್ವಾಗತಿಸಿ, ಸ್ಫೂರ್ತಿ ವಂದಿಸಿ, ತನ್ವಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top