ಸುರತ್ಕಲ್: ಭಾರತೀಯ ಜನತಾ ಪಾರ್ಟಿ, ಮಂಗಳೂರು ನಗರ ಉತ್ತರ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.
ಶಾಸಕರಾದ ಡಾ. ಭರತ್ ವೈ ಶೆಟ್ಟಿ ವೈ ಚಾಲನೆ ನೀಡಿ ಪರಿಸರದ ಉಳಿವಿಗೆ ಕಾರ್ಯಕರ್ತರು ಕೈಗೊಂಡ ಕೆಲಸವನ್ನು ಶ್ಲಾಘಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ತಿಲಕ್ ರಾಜ್ ಕೃಷ್ಣಾಪುರ, ಒಬಿಸಿ ಮೋರ್ಚಾ ಮಂಗಳೂರು ನಗರ ಉತ್ತರ ಮಂಡಲ ಪ್ರಭಾರಿ ದೀಪಿಕಾ, ವಸಂತಿ ಸುಧಾಕರ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಮುಡಾಯಿಕೋಡಿ, ಮಹಾಬಲ ಅಡ್ಯಾರ್ , ಜಿಲ್ಲಾ ಒಬಿಸಿ ವಿಭಾಗದ ಕಾರ್ಯದರ್ಶಿ ವಸಂತ್ ಹೊಸಬೆಟ್ಟು, ಮಂಡಲ ಕಾರ್ಯದರ್ಶಿ ಪುಷ್ಪರಾಜ್ ಮುಕ್ಕ, ಮಹಾ ಶಕ್ತಿಕೇಂದ್ರ ಸುರತ್ಕಲ್ ನಗರ 1 ಮತ್ತು 2ರ ಅಧ್ಯಕ್ಷರಾದ ದಿನಕರ್ ಇಡ್ಯಾ, ಸುನಿಲ್ ಕುಳಾಯಿ ಮಹಾನಗರ ಪಾಲಿಕೆ ಸದಸ್ಯರಾದ ವರುಣ್ ಚೌಟ, ಶೋಭಾ ರಾಜೇಶ್, ಶ್ವೇತಾ ಪೂಜಾರಿ, ಲಕ್ಷ್ಮೀ ಶೇಖರ್ ದೇವಾಡಿಗ, ಸರಿತಾ ಶಶಿಧರ್ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ