ದ‌.ಕ ಜಿಲ್ಲೆಯ ಸಾಮರ್ಥ್ಯ ಜಗತ್ತಿಗೆ ಪರಿಚಯವಾಗಲಿ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Upayuktha
1 minute read
0

ಕರಾವಳಿಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೇಂದ್ರ ಸಚಿವರ ಜತೆ ಚರ್ಚೆ



ಮಂಗಳೂರು: ಭಾರತದ ಪಶ್ಚಿಮ ಕರಾವಳಿಯ ಅದ್ಭುತ ತಾಣ ಮಂಗಳೂರಿನ ಪ್ರವಾಸೋದ್ಯಮಕ್ಕೆ ಒತ್ತು ನೀಡುವಂತೆ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಬಳಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದರು.


'ಸಸಿಹಿತ್ಲು ಬೀಚ್‌ನಲ್ಲಿ ಸಾಹಸ ಪ್ರವಾಸೋದ್ಯಮವನ್ನು ಪರಿಚಯಿಸಬೇಕು ಹಾಗೂ ಭಾರತದಲ್ಲಿ ಪ್ರಥಮ ವಿಶ್ವಮಟ್ಟದ ಪ್ಯಾಡ್ಲಿಂಗ್ ಸ್ಪರ್ಧೆ ಆಯೋಜನೆಗೊಂಡ ಸಸಿಹಿತ್ಲು ಬೀಚ್‌ಗೆ ಬ್ಲೂ ಫ್ಲ್ಯಾಗ್ ಪ್ರಮಾಣೀಕರಣ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು 'ಯುವ ಪ್ರವಾಸೋದ್ಯಮ ಕ್ಲಬ್' ಗಳನ್ನು ಸ್ಥಾಪಿಸುವತ್ತ ಗಮನಹರಿಸಬೇಕು' ಇದರ ಕುರಿತು ತಕ್ಷಣ ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸಂಸದರು ಸಚಿವರ ಬಳಿ ಮನವಿ ಮಾಡಿದರು.


ಪಶ್ಚಿಮ ಘಟ್ಟ, ಸುಂದರವಾದ ಕಡಲತೀರ, ಹೆಸರಾಂತ ಧಾರ್ಮಿಕ ಕೇಂದ್ರಗಳು, ವರ್ಷದ ಉದ್ದಕ್ಕೂ ನಾನಾ ರೀತಿಯ ಆಚರಣೆಗಳು, ಐತಿಹಾಸಿಕ ಪ್ರಾಮುಖ್ಯತೆಯನ್ನು ಹೊಂದಿರುವ ತಾಣಗಳು ಹೀಗೆ ವಿಶಿಷ್ಠವಾದ ನೈಸರ್ಗಿಕ ಸೌಂದರ್ಯವನ್ನು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯು ಪ್ರಮುಖ ಪ್ರವಾಸಿ ತಾಣವಾಗಿ ಪರಿವರ್ತನೆಗೊಳ್ಳುವ ಎಲ್ಲಾ ಸಾಮರ್ಥ್ಯವನ್ನು ಹೊಂದಿದೆ ಹಾಗೂ ಇದನ್ನು ಸಾಧಿಸಲು ಸಚಿವರ ಬೆಂಬಲವನ್ನು ಸಂಸದರು ಕೋರಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top