ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ
ಉಜಿರೆ: ಇಲ್ಲಿನ ಶ್ರೀ ಧ. ಮಂ. ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಸ್ಯಸೌರಭ ಮತ್ತು ಇಕೋ ಕ್ಲಬ್ ಸಂಘಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಜು.6ರಂದು ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಬಿ.ಎ. ಕುಮಾರ ಹೆಗ್ಡೆ, ಸಂಘದ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ವಿಭಾಗದ ‘ಸಸ್ಯಸೌರಭ’ ಭಿತ್ತಿಪತ್ರಿಕೆಯ ಶೈಕ್ಷಣಿಕ ವರ್ಷದ ಮೊದಲ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಸಸ್ಯಸೌರಭ ಮತ್ತು ಇಕೋ ಕ್ಲಬ್ನ ಪದಾಧಿಕಾರಿಗಳ ಪದಗ್ರಹಣ ನೆರವೇರಿತು. ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು.
ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
ಸಸ್ಯಸೌರಭ ಸಂಘದ ಅಧ್ಯಕ್ಷೆ ಮೇಘಶ್ರೀ ವಿ.ಎಸ್. ಸ್ವಾಗತಿಸಿದರು. ಇಕೋ ಕ್ಲಬ್ ಅಧ್ಯಕ್ಷೆ ಪೂರ್ವಿಕ ಜಿ.ಕೆ. ವಂದಿಸಿದರು. ಅನುಪಮ್ ಬಿ. ಮತ್ತು ಶ್ಲಾಘನಾ ವಿ.ಎಸ್. ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ