ಮಂಗಳೂರು: ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿ ಆತ್ಮೀಯ ಆತಿಥ್ಯ ಸ್ವೀಕರಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ಮೇಯರ್ ಸುದೀರ್ ಶೆಟ್ಟಿ ಕಣ್ಣೂರು, ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಸಂಜೀವ ಮಠಂದೂರು, ಕಿಶೋರ್ ಕುಮಾರ್, ದಿವಾಕರ ಪಾಂಡೇಶ್ವರ, ರಮೇಶ್ ಕಂಡೆಟ್ಟು, ಗಣೀಶ್ ಕುಲಾಲ್, ರಾಹುಲ್ ಶೆಟ್ಟಿ, ಗೌತಮ್ ಮೊದಲಾದವರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ