ಜುಲೈ 14: ಚೆನ್ನೈಯಲ್ಲಿ ವಿಭಾ ಶ್ರೀನಿವಾಸ್ ನಾಯಕ್ ಸಂಗೀತ, ಸನ್ಮಾನ ಕಾರ್ಯಕ್ರಮ

Upayuktha
0



ಮಂಗಳೂರು: ಚೆನ್ನೈ ನಗರದ ಸಂಯುಕ್ತ ಗೌಡ ಸಾರಸ್ವತ ಸಭಾ ವತಿಯಿಂದ ಶ್ರೀ ಜೆ.ಎಸ್. ಪ್ರಭು ಹಾಗೂ ಶ್ರೀಮತಿ ರಮಾಬಾಯಿ ಪ್ರಭು ಸ್ಮರಣಾರ್ಥ ಸಂಗೀತ ಕಾರ್ಯಕ್ರಮ ಜುಲೈ 14 ಭಾನುವಾರದಂದು ಸಂಜೆ 6 ಗಂಟೆಯಿಂದ 7.45 ರ ವರೆಗೆ ಚೆನ್ನೈ ಟಿ ನಗರದ ಮ್ಯೂಸಿಕ್ ಹಾಲ್‌ನಲ್ಲಿ ನಡೆಯಲಿದೆ.


ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ ಕಲಾವಿದೆ ವಿಭಾ ಶ್ರೀನಿವಾಸ್ ನಾಯಕ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಶಿರಸಿಯ ಭರತ್ ಹೆಗ್ಡೆ ಹಾರ್ಮೋನಿಯಂ ಹಾಗೂ ಮೂಡಬಿದಿರೆಯ ವಿಗ್ನೇಶ್ ಪ್ರಭು ತಬಲದಲ್ಲಿ ಸಾಥ್ ನೀಡಲಿದ್ದಾರೆ. ಸಂಯುಕ್ತ ಗೌಡ ಸಾರಸ್ವತ ಸಭಾ ಅಧ್ಯಕ್ಷ ಡಾ. ಎಸ್. ದಿನೇಶ್ ನಾಯಕ್ ಅವರು ಸಂಗೀತ ಕಲಾವಿದರನ್ನು ಸನ್ಮಾನಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top