ಪುತ್ತೂರು: ವಿವೇಕ ಪ್ರದೀಪ್ತಿ-2024- ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ ಜು.5ಕ್ಕೆ

Upayuktha
0

 


ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಶುಕ್ರವಾರದಂದು (ಜು.5) ಬೆಳಗ್ಗೆ 9:00 ಗಂಟೆಗೆ 'ವಿವೇಕ ಪ್ರದೀಪ್ತಿ-2024' ಶೀರ್ಷಿಕೆಯಡಿ 2023-24 ನೇ ಶೈಕ್ಷಣಿಕ ಸಾಲಿನ ಸಾಧಕ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. 


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ ವಹಿಸಲಿದ್ದಾರೆ. ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಸುಮಾರು 493 ವಿದ್ಯಾರ್ಥಿಗಳ ಹಾಗೂ ಜೆ.ಇ.ಇ,  ನೀಟ್‌, ಸಿ.ಇ.ಟಿ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ವಿಶೇಷ ಅಭ್ಯಾಗತರಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್‌ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್‌.ಬಿ ಭಾಗವಹಿಸಲಿದ್ದಾರೆ.


ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ವತ್ಸಲಾರಾಜ್ಞಿ ಹಾಗೂ ಡಾ.ಕೆ.ಎನ್‌ ಸುಬ್ರಹ್ಮಣ್ಯ, ಪ್ರಾಂಶುಪಾಲರ ಮಹೇಶ್‌ ನಿಟಿಲಾಪುರ, ಉಪಪ್ರಾಂಶುಪಾಲರ ದೇವಿಚರಣ್‌ ರೈ ಎಂ, ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top