ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಮತ್ತು ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಅದು ಮುಡಾ ಹಗರಣ ಇರಬಹುದು ಅಥವಾಾ ವಾಲ್ಮೀಕಿ ನಿಗಮದ ಹಗರಣ ಇರಬಹುದು ಅದನ್ನು ಒಂದು ನಿರ್ಣಾಯಕ ಸ್ಥಿತಿಗೆ ತೆಗೆದುಕೊಂಡು ಹೋಗಲು ಬಿಜೆಪಿ ಬದ್ಡವಾಗಿ ವಿಧಾನಸಭೆ ಅಧಿವೇಶನದಲ್ಲಿ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.
ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಎಸ್ ಟಿ ನಿಗಮದ ಹಣದ ದುರ್ಬಳಕೆ, ವಾಲ್ಮೀಕಿ ನಿಗಮದಲ್ಲಿ ನಡೆದ ಭ್ರಷ್ಡಾಚಾರ, ಬೇನಾಮಿ ಖಾತೆಗಳಿಗೆ ಕೋಟ್ಯಂತರ ರೂ ಹಣದ ವರ್ಗಾವಣೆ ಇವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೂಗಿನ ಅಡಿಯಲ್ಲೇ ನಡೆದಿವೆ. ಅವರ ಅಧಿಕಾರದ ದುರ್ಬಳಕೆ ಇಲ್ಲದೆ ಇವೆಲ್ಲ ನಡೆಯಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಹಗರಣಗಳಿಗೆ ಅವರೇ ನೇರ ಹೊಣೆ ಎಂದು ಸಿ.ಟಿ ರವಿ ಹೇಳಿದರು.
ಆದರೂ ಸಿದ್ದರಾಮಯ್ಯನವರು ಭಂಡತನದಿಂದ ಹಗರಣಗಳ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ನೈತಿಕತೆ ಏನಾದರೂ ಉಳಿದಿದ್ದರೆ ಕೂಡಲೇ ರಾಜೀನಾಮೆ ಕೊಡಲಿ ಅಥವಾ ಸಿಬಿಐ ತನಿಖೆಗೆ ಒಪ್ಪಿಸಲಿ ಎಂದು ರವಿ ಆಗ್ರಹಿಸಿದರು.
ಮೈಸೂರಿನ ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರ ಭಾಗಿಯಾಗಿದ್ದಾರೆ. ಬಿಜೆಪಿ ಈ ಎಲ್ಲ ಪ್ರಕರಣಗಳ ವಿರುದ್ಧ ಸದನದ ಒಳಗೂ ಹೊರಗೂ ತೀವ್ರ ಹೋರಾಟ ನಡೆಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯತ್ತದೆ. ಹಾಗೆ ಮಾಡದಿದ್ದಲ್ಲಿ ನಮ್ಮ ಕಾರ್ಯಕರ್ತರೇ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ರವಿ ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ