ಬೆಳೆ ವಿಮೆ ನೋಂದಾಯಿಸಿಕೊಳ್ಳಲು ರೈತರಲ್ಲಿ ಮನವಿ- ಜಿಲ್ಲಾಧಿಕಾರಿ ಪ್ರಶಾಂತ್‌ ಕುಮಾರ್ ಮಿಶ್ರಾ

Upayuktha
0


ಬಳ್ಳಾರಿ:
ಜಿಲ್ಲೆಯಲ್ಲಿ ಎಲ್ಲಾ ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.


ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಮುಸುಕಿನ ಜೋಳ, ಜೋಳ, ಸೂರ್ಯಕಾಂತಿ, ತೊಗರಿ, ಹತ್ತಿ, ಕೆಂಪು ಮೆಣಸಿನ ಕಾಯಿ ಹಾಗೂ ಈರುಳ್ಳಿ ಬೆಳೆಗಳಿಗೆ ಜುಲೈ 31 ಕೊನೆಯ ದಿನವಾಗಿದೆ.


ಮಳೆಯಾಶ್ರಿತ ಬೆಳೆಗಳಾದ ರಾಗಿ, ನವಣೆ, ಹುರುಳಿ, ನೆಲಗಡಲೆ ಮತ್ತು ನೀರಾವರಿ ಬೆಳೆಗಳಾದ ಸಜ್ಜೆ, ತೊಗರಿ, ಭತ್ತ ಬೆಳೆಗಳಿಗೆ ಆಗಸ್ಟ್ 16 ಕೊನೆಯ ದಿನವಾಗಿದೆ. ಈ ಯೋಜನೆಯ ಲಾಭ ಪಡೆಯಲು ರೈತರು ನೋಂದಣಿಗಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಹೊಂದಿದ ಎಫ್‍ಐಡಿ ಸಂಖ್ಯೆ ಹಾಗೂ ತಮ್ಮ ಬ್ಯಾಂಕ್ ಖಾತೆಯನ್ನು ಆಧಾರ್ ಜೊತೆಗೆ ಎನ್‍ಪಿಸಿಐ ಸೀಡಿಂಗ್ ಮಾಡಿಸಿರಬೇಕು.


ಆಧಾರ್ ಕಾರ್ಡ್ನ ಜೆರಾಕ್ಸ್ ಪ್ರತಿ, ಪಹಣಿ ಪತ್ರಿಕೆ ಹಾಗೂ ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ದಾಖಲೆಗಳೊಂದಿಗೆ ಯಾವುದೇ ಸ್ಥಳೀಯ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಹೊಸದಾಗಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top