ತೆಂಕನಿಡಿಯೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಕನ್ನಡ ವಿಭಾಗ ಮತ್ತು ಐಕ್ಯುಎಸಿ ಜಂಟಿ ಆಶ್ರಯದಲ್ಲಿ ಜರುಗಿದ ಹಳೆಗನ್ನಡ ಕಾವ್ಯದೋದು ಕಮ್ಮಟ “ಕಬ್ಬದುಳುಮೆ”ಯ ಸಮಾರೋಪ ಕಾರ್ಯಕ್ರಮದಲ್ಲಿ ಕನ್ನಡ ಸಹಪ್ರಾಧ್ಯಾಪಕ ರಾಧಾಕೃಷ್ಣ ಮುಖ್ಯ ಅತಿಥಿಗಳಾಗಿ ಮಾತನಾಡಿ, ‘ನಮ್ಮ ನಾನು, ನುಡಿ, ಪರಂಪರೆಯ ಅಮೂಲ್ಯ ವಿಚಾರಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳು ಪ್ರಾಚೀನ ಕನ್ನಡ ಸಾಹಿತ್ಯದಲ್ಲಿ ಪರಿಣತಿಯನ್ನು ಪಡೆಯುವ ಅಗತ್ಯವಿದೆ’ ಎಂದು ಹೇಳಿದರು.
ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಶ್ರೀಮತಿ ರತ್ನಮಾಲಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶ್ರೀಮತಿ ಶರಿತ್ ಹೆಗ್ಡೆ ಕನ್ನಡ ವಿಭಾಗದ ವಾರ್ಷಿಕ ವರದಿ ವಾಚಿಸಿದರು. ಶ್ರೀಮತಿ ನೈನಾ ಸ್ವಾಗತಿಸಿ, ಕು. ರಶ್ಮಿತಾ ವಂದಿಸಿದ ಈ ಕಾರ್ಯಕ್ರಮವನ್ನು ಕು. ಪ್ರಕೃತಿ ನಿರೂಪಿಸಿದರು. ವಿಭಾಗದ ವತಿಯಿಂದ ರಾಧಾಕೃಷ್ಣ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ವಿಭಾಗ ಮುಖ್ಯಸ್ಥರಾದ ಪ್ರೊ. ಜಯಪ್ರಕಾಶ ಶೆಟ್ಟಿ ಹೆಚ್. ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ