ಪುತ್ತೂರು: ಅಂತರ್ ಜಿಲ್ಲಾ ಭಾಷಣ ಹಾಗೂ ದೇಶಭಕ್ತಿಗೀತೆ ಸ್ಪರ್ಧೆ

Upayuktha
0


ಪುತ್ತೂರು: ಕಾರ್ಗಿಲ್ ವಿಜಯೋತ್ಸವಕ್ಕೆ 25 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಶಾಲಾ ಶಿಕ್ಷಣ ಇಲಾಖೆ ಹಾಗೂ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಜಂಟಿಯಾಗಿ ದಕ್ಷಿಣ ಕನ್ನಡ, ಕೊಡಗು ಹಾಗೂ ಕಾಸರಗೋಡು ಜಿಲ್ಲೆಗಳ ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಭಾಷಣ ಸ್ಪರ್ಧೆ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಆಯೋಜನೆ ಮಾಡಿವೆ. ಎರಡೂ ಸ್ಪರ್ಧೆಗಳಲ್ಲಿ ಪ್ರಥಮ ಬಹುಮಾನ ರೂಪಾಯಿ ಐದು ಸಾವಿರ ಹಾಗೂ ದ್ವಿತೀಯ ಬಹುಮಾನ ರೂಪಾಯಿ ಮೂರು ಸಾವಿರವನ್ನು ನೀಡಲಾಗುತ್ತದೆ. 


ಭಾಷಣ ಸ್ಪರ್ಧೆಗೆ ಭಾರತೀಯ ಸೈನ್ಯ - ಸಾಧನೆ ಹಾಗೂ ಸಾಮರ್ಥ್ಯ ಎಂಬ ವಿಷಯವನ್ನು ನೀಡಲಾಗಿದೆ. ದೇಶಭಕ್ತಿ ಗೀತೆಗೆ ಕನಿಷ್ಟ ಮೂರು ಜನರ ತಂಡ ಹಾಗೂ ಗರಿಷ್ಟ ಐದು ಜನರ ತಂಡ ಭಾಗವಹಿಸಬಹುದಾಗಿದ್ದು, ಎರಡೂ ಸ್ಪರ್ಧೆಗೆ ತಲಾ ಐದು ನಿಮಿಷಗಳ ಸಮಯಾವಕಾಶ ನೀಡಲಾಗಿದೆ. ಒಂದು ಸಂಸ್ಥೆಯಿಂದ ಎಷ್ಟು ತಂಡಗಳು ಬೇಕಾದರೂ ಭಾಗವಹಿಸುವುದಕ್ಕೆ ಅವಕಾಶವಿದೆ ಹಾಗೂ ಯಾವುದೇ ನೋಂದಾವಣೆ ಶುಲ್ಕ ಇರುವುದಿಲ್ಲ. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜುಲೈ 10ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸುವಂತೆ ತಿಳಿಸಲಾಗಿದೆ. ಸ್ಪರ್ಧೆ ಜುಲೈ 15ರಂದು ನಡೆಯಲಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ 9901195417, 9741481600 ಅಥವಾ 9449102082 ಸಂಖ್ಯೆಗೆ ಕರೆಮಾಡಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top