ಮಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಶ್ರೀನಿವಾಸ ವಿಶ್ವವಿದ್ಯಾಲಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಕಾಮರ್ಸ್, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ- ವಿಚಾರ ಸಂಕಿರಣ ಜುಲೈ 30 ರಂದು ನಡೆಯಲಿದೆ. ಮಂಗಳವಾರ ಬೆಳಿಗ್ಗೆ 10:30ಗಂಟೆಗೆ ನಗರದ ಶ್ರೀನಿವಾಸ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕಾಯ೯ಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀನಿವಾಸ ವಿಶ್ವವಿದ್ಯಾನಿಲಯ ಕುಲಾದಿಪತಿ ಡಾ. ಸಿಎ. ಎ ರಾಘವೇಂದ್ರ ರಾವ್ ಅಧ್ಯಕ್ಷತೆಯಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ವಿಶ್ವವಿದ್ಯಾಲಯ ಸಹಕುಲಾಧಿಪತಿ ಡಾ. ಎ ಶ್ರೀನಿವಾಸ ರಾವ್, ಡೀನ್ ಡಾ. ವೆಂಕಟೇಶ್ ಅಮೀನ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಭಾಗವಹಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಉದಯಕುಮಾರ್ ಇರ್ವತ್ತೂರು ಭಾಗವಹಿಸುವರು ಎಂದು ವಾರ್ತಾ ಇಲಾಖೆ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ