ಪುತ್ತೂರು: ಅಂಬಿಕಾದಲ್ಲಿ ಅಂತರ್ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆ, ಭಾಷಣ ಸ್ಪರ್ಧೆ

Upayuktha
0

ಉತ್ತಮರ ಸಹವಾಸದಿಂದ ವ್ಯಕ್ತಿತ್ವ ನಿರ್ಮಾಣ ಸಾಧ್ಯ : ಡಾ.ಎಚ್.ಮಾಧವ ಭಟ್




ಪುತ್ತೂರು :
ಪ್ರತಿಯೊಬ್ಬರ ಬದುಕಿನಲ್ಲಿಯೂ ಸ್ಮೃತಿ ಮತ್ತು ವಿಸ್ಮೃತಿಗಳು ಬರುವುದು ಸಹಜ. ಒಳ್ಳೆಯ ವಿಚಾರಗಳನ್ನು ಸದಾ ಮನಸ್ಸಿಟ್ಟು ಕೇಳಿ ಅದನ್ನು ನೆನಪಿಟ್ಟುಕೊಳ್ಳುವುದು ಹಾಗೆಯೇ ಋಣಾತ್ಮಕ ಅಂಶಗಳನ್ನು ಮರೆತುಬಿಡುವುದನ್ನು ಮಾಡಲೇಬೇಕು.


ಒಳ್ಳೆಯ ನಡೆ ನುಡಿ ಆಚಾರ ವಿಚಾರ ಬಲ್ಲವನ ಸಹವಾಸ ಮಾಡುವುದರಿಂದ ನಮ್ಮ ವ್ಯಕ್ತಿತ್ವ ಬೆಳಗುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್ ಮಾಧವ ಭಟ್ ಹೇಳಿದರು.


ಅವರು ನಗರದ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ವತಿಯಿಂದ ಕಾರ್ಗಿಲ್ ವಿಜಯೋತ್ಸವದ 25ನೆಯ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಭಾಷಣ ಹಾಗೂ ದೇಶಭಕ್ತಿ ಗೀತೆಯ ಸ್ಪರ್ಧೆಗಳನ್ನು ಉದ್ಘಾಟಿಸಿ ಸೋಮವಾರ ಮಾತನಾಡಿದರು.


ಮುಖ್ಯ ಅತಿಥಿಯಾಗಿ ಆಡಳಿತ ಮಂಡಳಿಯ ಮತ್ತೋರ್ವ ಸದಸ್ಯ ಸುರೇಶ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಬೆಳೆಯಬೇಕು. ಯಾವುದೇ ಸ್ಪರ್ಧೆಯಲ್ಲಿ ವಿಜಯಿ ಯಾಗುವುದು ಮುಖ್ಯವಲ್ಲ ಹೊರತಾಗಿ ಭಾಗವಹಿಸುವುದು ಮುಖ್ಯ. ಸಮಾನತೆಯ ಭಾವವನ್ನಿರಿಸಿ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೂ ಭಾಗವಹಿಸಿದಾಗ ಅತ್ಯುತ್ತಮ ಅನುಭವ ನಮ್ಮದಾಗುತ್ತದೆ ಎಂದರು.


ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ, ನಮ್ಮಲ್ಲಿ ರಾಷ್ಟ್ರೀಯ ಚಿಂತನೆಗಳು ಬೆಳೆಯಬೇಕು. ಈ ನಿಟ್ಟಿನಲ್ಲಿ ಅಂಬಿಕಾ ಹೊಸ ಯೋಚನೆ – ಯೋಜನೆಗಳ ಮೂಲಕ ದೇಶಭಕ್ತಿಯನ್ನು ಸಾರುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬಂದಿದೆ ಎಂದರು.


ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತ ರಿದ್ದರು. ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಪ್ರಾಶುಪಾಲ ಸತ್ಯಜಿತ್ಉ ಪಾಧ್ಯಾಯ ಪ್ರಸ್ತಾವನೆಗೈದು ಸ್ವಾಗತಿಸಿದರು. ಭೌತಶಾಸ್ತ್ರ ಉಪನ್ಯಾಸಕ ಸುಬ್ರಮಣ್ಯ ಪ್ರಾರ್ಥಿಸಿದರು.


ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ನಡೆಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top