ಪುತ್ತೂರು: ಸಾಹಿತ್ಯ ಸಂಘದ ಉದ್ಘಾಟನೆ, ಪತ್ರಿಕಾ ವರದಿಗಾರಿಕೆ ಕಾರ್ಯಾಗಾರ

Upayuktha
0




ಪುತ್ತೂರು:
ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಸಾಹಿತ್ಯ ಸಂಘದ ಉದ್ಘಾಟನೆ ಹಾಗೂ ಪತ್ರಿಕಾ ವರದಿಗಾರಿಕೆ ಕಾರ್ಯಾಗಾರವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು  ವಿವೇಕಾನಂದ ಪಾಲಿಟೆಕ್ನಿಕ್‌ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ರವಿ ಮುಂಗ್ಲಿಮನೆ ನೆರವೇರಿಸಿದರು. 


ಈ ಸಂದರ್ಭದಲ್ಲಿ ಮಾತನಾಡಿದ ಅವರು “ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಸಮಾಜದಲ್ಲಿ ಕ್ರಿಯಾಶೀಲ ವ್ಯಕ್ತಿಗಳಾಗಿ ಹೊರಹೊಮ್ಮಲು ಸಹಕಾರಿಯಾಗುತ್ತದೆ. 


ನೈಜತೆಯ ವರದಿ ಮಾಡುವುದು ಕೂಡಾ ಒಂದು ರೀತಿಯ ಸೇವೆಯೇ ಆಗಿದ್ದು ವಿದ್ಯಾರ್ಥಿಗಳು ಇಂತಹ ಕೆಲಸಗಳಲ್ಲಿ ಭಾಗಿಗಳಾಗಿ ಸಮಾಜಸೇವೆ, ದೇಶಸೇವೆ ಮಾಡಬೇಕು” ಎಂದು ನುಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ ಎನ್‌. ಕೆ ಪಾಲ್ಗೊಂಡರು. 


ಕಾರ್ಯಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ ವಹಿಸಿಕೊಂಡರು. ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ಸಂಯೋಜಕರಾದ ಶ್ರೀವತ್ಸ ಉಪಸ್ಥಿತರಿದ್ದು, “ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಸಾಹಿತ್ಯಸಂಘ ಆರಂಭಿಸುವುದು ಕಾಲೇಜು ಆಡಳಿತ ಮಂಡಳಿಯ ಆಶಯವಾಗಿದ್ದು, ಅದು ಈ ವರ್ಷ ಕೈಗೂಡಿದೆ. ಶಿಕ್ಷಣದ ಜತೆಜತೆಗೆ ತಮ್ಮ ಕೌಶಲ್ಯಗಳ ಅನಾವರಣಕ್ಕೆ ವೇದಿಕೆ ಕಲ್ಪಿಸಿಕೊಡುವುದು ವರದಿಗಾರಿಕೆ ಕಾರ್ಯಾಗಾರದ ಉದ್ದೇಶವಾಗಿರುತ್ತದೆ. 


ವಿದ್ಯಾರ್ಥಿಗಳು ಇಂತಹ ವೇದಿಕೆಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು

ಪ್ರೇರಣೆಯನ್ನು ನೀಡಿದರು. ಪತ್ರಿಕಾ ವರದಿಗಾರಿಕೆಯ ಬಗೆಗೆ ನಡೆದ ಕಾರ್ಯಾಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಾಗರಾಜ ಎನ್‌. ಕೆ ಇವರು ಮಾತನಾಡಿ, “ಪತ್ರಿಕಾ ವರದಿಗಾರಿಕೆಗೆ ಅತೀ ಅಗತ್ಯವಾಗಿ ಭಾಷಾ ಶುದ್ಧತೆ ಬೇಕಾಗುತ್ತದೆ. 


ಇದು ವರದಿಯ ತೂಕವನ್ನು ಹೆಚ್ಚಿಸುತ್ತದೆ. ಸಾಧ್ಯವಾದಷ್ಟು ವರದಿಗಾರಿಕೆಯು ಸತ್ಯಾಂಶವನ್ನು ತೆರೆಡಿಡಬೇಕಾಗುತ್ತದೆ. ಅದರಲ್ಲಿ ಆಸಕ್ತಿ ಇದ್ದಾಗ ಮಾತ್ರ ವರದಿಗಾರಿಕೆ ಜೀವಂತವಾಗಿರುತ್ತದೆ.” ಎಂದು ನುಡಿದರು. ಬಳಿಕ ಚಟುವಟಿಕೆ ಆಧಾರಿತವಾದ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಉಪನ್ಯಾಸಕೇತರ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ಮಹಾವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದರು. ಆಂಗ್ಲಭಾಷಾ ವಿಭಾಗದ ಮುಖ್ಯಸ್ಥರಾದ ವಿದ್ಯಾಪಾರ್ವತಿ ಸ್ವಾಗತಿಸಿದರು. ವಿದ್ಯಾರ್ಥಿನಿ ಸಹನಾ ನಿರೂಪಿಸಿ, ಯುಕ್ತಶ್ರೀ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top