ಪುತ್ತೂರು: ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ವಿಸಿಇಟಿ ವಿದ್ಯಾರ್ಥಿಗಳ ಸಾಧನೆ

Upayuktha
0




ಪುತ್ತೂರು:  ವಿದ್ಯಾರ್ಥಿಗಳು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ 2023-24ನೇ ಶೈಕ್ಷಣಿಕ ಸಾಲಿನ ಅಂತಿಮ ವರ್ಷದ ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್  ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ,  ಕಾಲೇಜಿನ ಸಿವಿಲ್ ಎಂಜಿನಿಯರಿಂಗ್  ವಿಭಾಗದ ಕೇಶವ ಪ್ರಜ್ವಲ್.ಪಿ 9.38 ಸಿಜಿಪಿಎ ಅಂಕಗಳೊಂದಿಗೆ 3ನೇ ರ‍್ಯಾಂಕ್  ಹಾಗೂ ಕೆ.ಪಲ್ಲವಿ 9.33 ಸಿಜಿಪಿಎ ಅಂಕಗಳೊಂದಿಗೆ 5ನೇ ರ‍್ಯಾಂಕ್ ಗಳಿಸಿದ್ದಾರೆ. ಸಿವಿಲ್ ಎಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಪ್ರೊ.ಪ್ರಶಾಂತ್ ಹಾಗೂ ಪ್ರಾಧ್ಯಾಪಕರ ಸಮರ್ಥ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ.


ಕೇಶವ ಪ್ರಜ್ವಲ್.ಪಿ ಅವರು ಕುಂಬ್ಳೆಯ ಶ್ರೀವಾಣಿ ಹಾಗೂ ಉದಯಶಂಕರ ಭಟ್ ಅವರ ಪುತ್ರ.   ಹಾಗೂ ಕೆ. ಪಲ್ಲವಿ ಅವರು ಬಂಟ್ವಾಳದ ಅಲ್ಲಿಪಾದೆಯ ಚಂದ್ರಿಕಾ ಹಾಗೂ ಕೆ.ಕಿಶೋರ್ ಕುಮಾರ್  ಅವರ ಪುತ್ರಿ. ವಿದ್ಯಾರ್ಥಿಗಳ ಈ ಸಾಧನೆಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್, ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್  ಎಂಡ್  ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅವರನ್ನು  ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top