ಬಳ್ಳಾರಿ:ಶ್ರೀ ಕನಕದುರ್ಗಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ

Upayuktha
0


ಬಳ್ಳಾರಿ:
ಬಳ್ಳಾರಿ ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಿ ದೇಗುಲದ ಹುಂಡಿ ಎಣಿಕೆ ಕಾರ್ಯ ಶನಿವಾರ ಮಾಡಲಾಯಿತು. ಕಳೆದ 2024ರ ಮಾ.16 ರಿಂದ ಜು.6ರ ವರೆಗೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ಬಳ್ಳಾರಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹನುಮಂತಪ್ಪ, ದೇಗುಲದ ಪ್ರಧಾನ ಧರ್ಮಕರ್ತ ರಾಮಾಂಜನೇಯುಲು, ಬಸವರಾಜ, ಸೇರಿದಂತೆ ವ್ಯವಸ್ಥಾಪಕರು ಇತರರ ನೇತೃತ್ವದಲ್ಲಿ ಹುಂಡಿ ಹಣವನ್ನು ಎಣಿಕೆ ಕಾರ್ಯ ಮಾಡಲಾಯಿತು. ಒಟ್ಟು ಹುಂಡಿಯಲ್ಲಿ 43,44,266 ರೂ. ಹಣ ಸಂಗ್ರಹವಾಗಿದೆ, ಜೊತೆಗೆ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳು ದೇಗುಲಕ್ಕೆ ಸಮರ್ಪಣೆ ಮಾಡಲಾಗಿದ್ದು, ಅದರ ತೂಕವನ್ನು ಎಲ್ಲರ ಸಮಕ್ಷಮ ಮಾಡಲಾಯಿತು. ಈ ಸಂದರ್ಭದಲ್ಲಿ ಪೋಲೀಸ್ ಅಧಿಕಾರಿಗಳು, ಸಿಬ್ಬಂದಿಗಳು, ದೇಗುಲದ ಅರ್ಚಕರು, ಸಿಬ್ಬಂದಿಗಳು, ಭಕ್ತರು ಉಪಸ್ಥಿತರಿದ್ದರು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರು ಬಳ್ಳಾರಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹನುಮಂತಪ್ಪನವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top