ಸುರತ್ಕಲ್:ಕಾವ್ಯದ ಜೊತೆಗೆ ಬೆಳೆದಿರುವ ಗಮಕ ಕಲೆ ಶ್ರೇಷ್ಠವಾದುದು. ಜನ ಸಾಮಾನ್ಯರಿಗೆ ಕಾವ್ಯಗಳನ್ನು ಪರಿಚಯಿಸಿ ನಾಡಿನ ಶ್ರೇಷ್ಠ ಸಂಸ್ಕೃತಿ ಪಸರಿಸುವ ಕಾರ್ಯವನ್ನು ಗಮಕಿಗಳು ಮಾಡುತ್ತಿದ್ದಾರೆ ಎಂದು ಕರ್ನಾಟಕ ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಎ.ವಿ. ಪ್ರಸನ್ನ ನುಡಿದರು. ಅವರು ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಕರ್ನಾಟಕ ಗಮಕ ಕಲಾ ಪರಿಷತ್ತು ದ.ಕ. ಜಿಲ್ಲೆ, ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರು ಮತ್ತು ಸುರತ್ಕಲ್ ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಗೋವಿಂದ ದಾಸ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 9ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಮಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಸಮ್ಮೇಳನಾಧ್ಯಕ್ಷ ಗಮಕ ವಿದ್ವಾನ್ ಹೆಚ್. ಯಜ್ಞೇಶಾಚಾರ್ಯ ಹೊಸಬೆಟ್ಟು ಮಾತನಾಡಿ ಗಮಕ ವಾಚನ ಮನೆಮನೆಗಳಲ್ಲಿ ಚಳುವಳಿಯ ರೂಪದಲ್ಲಿ ನಡೆಸಬೇಕಾಗಿದೆ. ಶ್ರೇಷ್ಠತರ ಕಲೆಯಾದ ಗಮಕವನ್ನು ಸಾಂಸ್ಕೃತಿಕ ಸಂಸ್ಥೆಗಳು ರಕ್ಷಿಸುವ ಕಾರ್ಯ ಮಾಡಬೇಕಾಗಿದೆ ಎಂದರು.
ಕರ್ನಾಟಕ ಗಮಕ ಕಲಾ ಪರಿಷತ್, ಬೆಂಗಳೂರಿನ ಕಾರ್ಯದರ್ಶಿ ದಕ್ಷಿಣಾ ಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗಮಕ ಪರಂಪರೆ ಅನನ್ಯವಾದುದು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ. ಜಿಲ್ಲಾ ಗಮಕ ಪರಿಷತ್‌ನ ಅಧ್ಯಕ್ಷ ಪ್ರೊ, ಮಧೂರು ಮೋಹನ ಕಲ್ಲೂರಾಯ ಅವರು ಯುವಜನತೆ ಗಮಕ ಕಲೆಯಲ್ಲಿ ಆಕರ್ಷಿತರಾಗಲು ಕಾರ್ಯ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಸಮ್ಮೇಳನಾಧ್ಯಕ್ಷ ಹೆಚ್. ಯಜ್ಞೇಶಾಚಾರ್ಯರನ್ನು ಸನ್ಮಾನಿಸಲಾಯಿತು. ಕೋಶಾಧಿಕಾರಿ ಚಂದ್ರಿಕಾ ಸುರೇಶ್ಅ ಭಿನಂದನಾ ಪತ್ರ ವಾಚಿಸಿದರು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅನುವಂಶಿಕ ಪ್ರಧಾನ ಅರ್ಚಕರಾದ ಶ್ರೀ ವೇ.ಮೂ. ಹರಿನಾರಾಯಣ ದಾಸ ಅಸ್ರಣ್ಣ ಅವರು ಯಕ್ಷಗಾನ ಕಲೆಯಂತೆ ಗಮಕ ಕಲೆಯೂ ನಮ್ಮ ಸಂಸ್ಕೃತಿಯಲ್ಲಿ ಬೆಸೆದುಕೊಂಡಿದೆ ಎಂದರು. ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ಮಾತನಾಡಿ ಹಿಂದೂ ವಿದ್ಯಾದಾಯಿನೀ ಸಂಘವು ತನ್ನ ಶಿಕ್ಷಣ ಸಂಸ್ಥೆಗಳ ಮೂಲಕ ಭಾರತೀಯ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯವನ್ನು ಬೆಳೆಸುವಲ್ಲಿ ಸರ್ವ ಪ್ರೋತ್ಸಾಹ ನೀಡುತ್ತಿದೆ ಎಂದರು.
ಕಲ್ಲೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಮಾತನಾಡಿ ಸಮ್ಮೇಳನಗಳನ್ನು ನಡೆಸುವುದರಿಂದ ವಿದ್ಯಾರ್ಥಿಗಳು ನಮ್ಮ ಕಲೆ ಸಂಸ್ಕೃತಿಗಳನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ ಎಂದರು. ಕವಿ ಮತ್ತು ವ್ಯಾಖ್ಯಾನಕಾರ ಸೇರಾಜೆ ಸೀತಾರಾಮ ಭಟ್ ಸಮ್ಮೇಳನಾಧ್ಯಕ್ಷರನ್ನು ಪರಿಚಯಿಸಿದರು. ಗಮಕಿ ಯಾಮಿನಿ ಭಟ್ ಮಂಗಳೂರು ನಾಂದಿ ಪದ್ಯವನ್ನು ಹಾಡಿದರು. ಗಮಕ ಕಲಾ ಸಮ್ಮೇಳನ ಸಮಿತಿಯ ಕಾರ್ಯಾಧ್ಯಕ್ಷ ಪ್ರೊ. ಪಿ. ಕೃಷ್ಣಮೂರ್ತಿ ಸ್ವಾಗತಿಸಿದರು. ಮಂಗಳೂರು ಗಮಕ ಕಲಾ ಪರಿಷತ್‌ನ ಅಧ್ಯಕ್ಷ ಸುರೇಶ್ ರಾವ್ ವಂದಿಸಿದರು. ನಿವೃತ್ತ ಪ್ರಾಧ್ಯಾಪಕ ಮತ್ತು ವ್ಯಾಖ್ಯಾನಕಾರ ಭಾಸ್ಕರ ರೈ ಕುಕ್ಕುವಳ್ಳಿ ವಂದಿಸಿದರು.
ಗೋವಿಂದ ದಾಸ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಲಕ್ಷ್ಮಿ ಪಿ., ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜು, ತಲಪಾಡಿಯ ಪ್ರಾಂಶುಪಾಲ ವಿನಾಯಕ್ ಬಿ.ಜಿ., ಕರ್ನಾಟಕ ಗಮಕ ಕಲಾ ಪರಿಷತ್ತು ಮಂಗಳೂರಿನ ಕಾರ್ಯದರ್ಶಿ ಶುಭಕರ ಕೆ ಉಪಸ್ಥಿತರಿದ್ದರು. ಸಮ್ಮೇಳನಾಧ್ಯಕ್ಷರನ್ನು ಶ್ರೀ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಕರೆ ತರಲಾಯಿತು. ಶ್ರೀ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇ. ಮೂ. ಐ ರಮಾನಂದ ಭಟ್ ಆಶೀರ್ವಚನ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ