ಉಜಿರೆ: ಇಲ್ಲಿನ ಶ್ರೀ ಧ.ಮಂ. ಕಾಲೇಜಿನಲ್ಲಿ ಪ್ರಥಮ ವರ್ಷದ ಐಚ್ಛಿಕ ಕನ್ನಡ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಹಾಗೂ ವಿಭಾಗದ ಪರಿಚಯ ಕಾರ್ಯಕ್ರಮ ಜರಗಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್., “ಕನ್ನಡ ಕಟ್ಟುವ ಕಾರ್ಯ ಕೇವಲ ಕನ್ನಡ ಅಧ್ಯಾಪಕರ ಜವಾಬ್ದಾರಿ ಮಾತ್ರ ಅಲ್ಲ. ಅದು ವಿದ್ಯಾರ್ಥಿಗಳ ಜವಾಬ್ದಾರಿಯೂ ಹೌದು. ಅದಕ್ಕೆ ನೀವೆಲ್ಲರೂ ಕೈಜೋಡಿಸಬೇಕು” ಎಂದರು.
“ಕನ್ನಡ ವಿಭಾಗ ತಿಂಗಳಿಗೆ ಒಂದಾದರೂ ಕಾರ್ಯಕ್ರಮವನ್ನು ಆಯೋಜಿಸುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಿ. ನಮ್ಮ ಕಾಲೇಜಿನಲ್ಲಿ ಉತ್ತಮ ಗ್ರಂಥಾಲಯವಿದೆ ಹಾಗೂ ನಮ್ಮ ವಿಭಾಗದಲ್ಲಿಯೂ ಗ್ರಂಥಾಲಯವಿದೆ ಅದನ್ನು ಬಳಸಿಕೊಳ್ಳಿ” ಎಂದು ಸಲಹೆ ನೀಡಿದರು. ಪ್ರಾಧ್ಯಾಪಕ ಡಾ. ಎನ್. ನಾಗಣ್ಣ ಶುಭ ಹಾರೈಸಿದರು.
ವಿಭಾಗದ ಭಿತ್ತಿಪತ್ರಿಕೆ ‘ಸಿರಿಗನ್ನಡ’ದ ನೂತನ ಸಂಚಿಕೆ ಬಿಡುಗಡೆಗೊಳಿಸಲಾಯಿತು. ನೂತನ ವಿದ್ಯಾರ್ಥಿಗಳಿಗೆ ವಿವಿಧ ಆಟಗಳನ್ನು ಆಯೋಜಿಸಲಾಯಿತು. ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಶೇಖರ್ ಹಳೆಮನೆ ಹಾಗೂ ಭವ್ಯ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಮನಿಷ್ ಸ್ವಾಗತಿಸಿ, ಅಮೃತ ವಂದಿಸಿ, ಹಿಮಾಲಿ ಎಮ್. ಪಿ. ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ