ಟೇಬಲ್ ಟೆನ್ನಿಸ್‌ ಸ್ಪರ್ಧೆ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

Upayuktha
0


ಪುತ್ತೂರು:
ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್‌ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಮತ್ತು ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಗಳಿಸಿರುತ್ತದೆ. ಪ್ರಥಮ ಸ್ಥಾನ ಪಡೆದ ಬಾಲಕಿಯರ ತಂಡ ಆಗಸ್ಟ್‌ 10 ರಂದು ಬೆಂಗಳೂರಿನ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಇಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್‌ ಟೆನ್ನಿಸ್‌ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ.

ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಅನನ್ಯ ಪಿ.ಆರ್‌, ಶ್ರೇಯ ಎಮ್ ಹಾಗೂ  ದ್ವಿತೀಯ ಪಿಯುಸಿಯ ಪೂರ್ವಿ ಎಮ್‌ ಎಸ್‌, ವರ್ಷ ಗೌಡ ಕೆ.ಎಮ್‌ ಭಾಗವಹಿಸಿದ್ದರು. ಬಾಲಕರ ತಂಡದಲ್ಲಿ  ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ತರುಣ್‌ ಪಿ ರಾವ್‌, ನಿಲನ್‌ ಸಿ.ವಿ ರೈ ಮತ್ತು ಆರ್ ರೋಹಿತ್‌ ಕುಮಾರ್‌ ಭಾಗವಹಿಸಿದ್ದರು.‌ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ.ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ.

ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top