ಪುತ್ತೂರು:ಜಿಲ್ಲಾಮಟ್ಟದ ಖೋ ಖೋ ಪಂದ್ಯಾಟ - ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ

Upayuktha
0


ಪುತ್ತೂರು:
ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ವಿವೇಕಾನಂದ ಕಾಲೇಜು ಕ್ರೀಡಾಂಗಣದಲ್ಲಿ ನಡೆದ  ವಿದ್ಯಾಭಾರತಿ  ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟದ ಖೋ ಖೋ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. 

  ತಂಡದಲ್ಲಿ ದ್ವಿತೀಯ ಪಿಯುಸಿಯ ಜಿಷ್ಣು ಪ್ರಕಾಶ್‌, ಗುರುಕಿರಣ್‌, ಕೌಶಲ್‌, ಓಂಕಾರ್‌ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ವನಿಶ್‌, ಚಿಂತನ್‌, ಭವಿಷ್‌, ಸೃಜನ್‌,ತರುಣ್‌, ಮಿಥುನ್, ತೇಜಸ್‌.ಪಿ.ಕೆ, ಮನ್ವಿತ್‌, ಗೌತಮ್‌, ವೇದಾಂತ್‌, ಪ್ರೇಕ್ಷಿತ್‌, ದೀಪಕ್‌, ಸೃಜನ್‌ ಭಾಗವಹಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್‌, ಡಾ. ಜ್ಯೋತಿ ಮತ್ತು ಯತೀಶ್‌ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top