ಬೆಂಗಳೂರು: ಜಯನಗರ ರಾಯರ ಮಠದಲ್ಲಿ ಟಿಟಿಡಿ ವಿಶೇಷ ಕಾರ್ಯಕ್ರಮ

Upayuktha
0


ಬೆಂಗಾಳೂರು: 
ಬೆಂಗಳೂರಿನ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 6 ರಿಂದ 9ರ ವರೆಗೆ ವಿವಿಧ ಭಜನಾ ಮಂಡಳಿಗಳಿಂದ ಹರಿ ಭಜನೆ,  ಶ್ರೀ ಬ್ರಹ್ಮಣ್ಯಾಚಾರ್ಯರಿಂದ "ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ" ವಿಷಯವಾಗಿ ಧಾರ್ಮಿಕ ಪ್ರವಚನ, ಶ್ರೀಮತಿ ಚಾಂದಿನಿ ಗರ್ತಿಕೆರೆ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ, ಆಗಸ್ಟ್ 8, ಗುರುವಾರ ಬೆಳಗ್ಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಸುಮಾರು ಐದು ಸಾವಿರ ಜನರಿಗೆ ಅನ್ನದಾನ ಸೇವೆ,  ಸಂಜೆ ಕಾರ್ಯಕ್ರಮದಲ್ಲಿ ರಥೋತ್ಸವ, ಪಲ್ಲಕ್ಕಿ ಉತ್ಸವ, ಗಜವಾಹನೋತ್ಸವ ತೊಟ್ಟಿಲು ಸೇವೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ ನಡೆಯಿತು.  

ಇದೇ ಸಂದರ್ಭದಲ್ಲಿ ವಿದ್ವಾನ್ - ಬ್ರಹ್ಮಣ್ಯ ಆಚಾರ್ಯರಿಗೆ ಶ್ರೀ ಮಠದ ಪರವಾಗಿ ಆರ್ ಕೆ ವಾದೀಂದ್ರಾಚಾರ್ಯರು ಮತ್ತು ನಂದಕಿಶೋರಾಚಾರ್ಯರು ಸನ್ಮಾನಿಸಿದರು. ಈ ವಿಶೇಷ ಕಾರ್ಯಕ್ರಮಗಳಿಗೆ ಸಹಕಾರ ನೀಡುತ್ತಿರುವ ಸುಧೀಂದ್ರ  ದೇಸಾಯಿಯವರು ಮತ್ತು ಶ್ರೀಮಠದ ಸಿಬ್ಬಂದಿಗಳು ಹಾಗೂ ನೂರಾರು ಭಕ್ತರು ಭಾಗವಹಿಸಿ ಶ್ರೀ ಹರಿವಾಯು ಗುರುಗಳ ಅನುಗ್ರಹಕ್ಕೆ ಪಾತ್ರರಾದರು.


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top