ಸುರತ್ಕಲ್: ಗ್ರಂಥಪಾಲಕರ ದಿನಾಚರಣೆ

Upayuktha
0


ಸುರತ್ಕಲ್:ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ಗ್ರಂಥಾಲಯ ವಿಭಾಗಗಳ ಸಹಭಾಗಿತ್ವದಲ್ಲಿ ಗ್ರಂಥಪಾಲಕರ ದಿನಾಚರಣೆಯನ್ನು ಕಾಲೇಜಿನ ಗ್ರಂಥಾಲಯದಲ್ಲಿ ಗ್ರಂಥಾಲಯ ಪಿತಾಮಹರಾದ ಡಾ.ಎಸ್.ಆರ್ ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಅರ್ಚಿಸುವ ಮೂಲಕ ಆಚರಿಸಲಾಯಿತು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿಯವರು ಗ್ರಂಥಾಲಯದ ಮಹತ್ವದ ಬಗ್ಗೆ ತಿಳಿಸಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ಗ್ರಂಥಪಾಲಕಿ ಡಾ.ಸುಜಾತಾ ಬಿ, ಡಾ. ಎಸ್.ಆರ್ ರಂಗನಾಥನ್ ರವರ ಸಾಧನೆಯನ್ನು ಸ್ಮರಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ. ನೀಲಪ್ಪ ವಿ, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಂಯೋಜಕರಾದ ಪ್ರೊ. ಹರೀಶ ಆಚಾರ್ಯ, ಪಿ,ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್. ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top