ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಅಂಚೆ ಇಲಾಖೆ ಸಹಾಭಾಗಿತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯರಿಗೆ 10 ಲಕ್ಷ ರೂಪಾಯಿ ಉಚಿತ ವಿಮಾ ಯೋಜನೆಯ ನೋಂದಾವಣೆ ಶಿಬಿರ ಸೆಪ್ಟೆಂಬರ್ 1 ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಧೀಕ್ಷಕ ರಾಗಿರುವ ಎಂ ಸುಧಾಕರ ಮಲ್ಯ ನೆರವೇರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ಆನಂದ್ ಶೆಟ್ಟಿ, ಮಂಗಳೂರು ಪ್ರೆಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ. ಆರ್ ಅವರು ಗೌರವ ಉಪಸ್ಥಿತರಿರುತ್ತಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ