ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ಹಾಗೂ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆ ಕಾಟಿಪಳ್ಳ ಇವರ ಆಶ್ರಯದಲ್ಲಿ 102ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಆ.31ರಂದು ಅಪರಾಹ್ನ 2:30ರಿಂದ 3:30ರ ತನಕ ಕಾಟಿಪಳ್ಳದ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ.
ಸಂಸ್ಥೆಯ ಅಧ್ಯಕ್ಷ ಪಿ.ದಯಾಕರ್ ಸಮಾರಂಧ ಅಧ್ಯಕ್ಷತೆ ವಹಿಸಲಿದ್ದು, ಬಿಎನ್‌ಜಿ ಟ್ರಸ್ಟ್ ಆಡಳಿತಾಧಿಕಾರಿ ಡಾ. ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಲಿದ್ದಾರೆ ಎಂದು ಅಮೃತ ಪ್ರಕಾಶ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ತಿಳಿಸಿದ್ದಾರೆ.
ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ಕೃಷ್ಣಮೂರ್ತಿ, ಮಧುಸೂದನ ಕುಶೆ ಶಾಲೆ ಅತ್ತಾವರದ ಪ್ರಾಂಶುಪಾಲ ಬಿಂದುಸಾಋ ಶೆಟ್ಟಿ, ಹಾಗೂ ಕೆನರಾ ಕಾಲೇಜಿನ ಹಿರಿಯ ಉಪನ್ಯಾಸಕಿ ಶೈಲಜಾ ಪುದುಕೋಳಿ ಅವರು ಭಾಗವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ