ಶ್ರೀ ಭಾರತಿ ವಿದ್ಯಾಪೀಠದಲ್ಲಿ ಸ್ವಾತಂತ್ರ್ಯೋತ್ಸವ

Upayuktha
0


ಮುಜುಂಗಾವು: ಶ್ರೀ ಭಾರತಿ ವಿದ್ಯಾಪೀಠ ಮುಜುಂಗಾವಿನಲ್ಲಿ 78ನೇ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎಸ್. ಎನ್ ರಾವ್ ಮುನ್ನಿಪ್ಪಾಡಿ ಇವರು ಧ್ವಜಾರೋಹಣಗೈದು ನಡೆದ ಸಭಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಸಂದೇಶವನ್ನು ನೀಡಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಕೃಷ್ಣ ಭಟ್ ಚೆಕ್ಕಣಿಕೆ ಮಾತನಾಡಿ ಮಕ್ಕಳಿಗೆ ಶುಭ ಹಾರೈಸಿದರು. ಶಾಲಾ ಆಡಳಿತ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ, ಶಾಲಾ ಮುಖ್ಯ ಶಿಕ್ಷಕ ಶ್ಯಾಮ್ ಭಟ್ ದರ್ಭೆಮಾರ್ಗ, ಶಾಲಾ ಸಹ ಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರ ಸರಸ್ವತಿ ಉಪಸ್ಥಿತರಿದ್ದರು. 



ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಜರಗಿತು. ನಂತರ ಪುಂಡರಿಕಾಕ್ಷ ಆಚಾರ್ಯ ಬೆಳ್ಳೂರು ಇವರ ನೇತೃತ್ವದಲ್ಲಿ ರಾಮಾಯಣ ಮಾಸಾಚರಣೆಯ ಐದನೇ ದಿನದ ಕಾರ್ಯಕ್ರಮಗಳು ಜರಗಿದವು. ಅಧ್ಯಾಪಿಕೆಯರಾದ ಶ್ರೀಮತಿ ವಿದ್ಯಾಲಕ್ಷ್ಮಿ ಸ್ವಾಗತಿಸಿ ಶ್ರೀಮತಿ ವಿದ್ಯಾ ಹೆಗಡೆಯವರು ಧನ್ಯವಾದವಿತ್ತರು. ಅಧ್ಯಾಪಿಕೆ ಕುಮಾರಿ ಶರಣ್ಯ ನಿರೂಪಿಸಿದರು .ಈ ಸಂದರ್ಭದಲ್ಲಿ ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ ಹಾಗೂ ಶ್ರೀ ಕೃಷ್ಣ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ಮುಜುಂಗಾವು ಇವರ ಪ್ರಾಯೋಜಕತ್ವದಲ್ಲಿ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top