ಅಕ್ಷಯ ಪಾತ್ರ ಪ್ರತಿಷ್ಠಾನದಿಂದ ಸರ್ಕಾರಿ, ಅನುದಾನಿತ ಶಾಲೆಯ 130+ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ

Upayuktha
0

ಡಾ. ಮಜೀದ್ ಫೌಂಡೇಶನ್‌ ಸಹಭಾಗಿತ್ವ 



ಬೆಂಗಳೂರು: ಭಾರತದ ಶಾಲಾ ಮಕ್ಕಳ ಹಸಿವು ಮತ್ತು ಅಪೌಷ್ಟಿಕತೆ ನೀಗಿಸಲು ಕೆಲಸ ಮಾಡುತ್ತಿರುವ ಲಾಭೋದ್ದೇಶವಿಲ್ಲದ ಸಂಸ್ಥೆ ಆಗಿರುವ ಅಕ್ಷಯ ಪಾತ್ರ ಪ್ರತಿಷ್ಠಾನವು ಡಾ. ಮಜೀದ್ ಫೌಂಡೇಶನ್ ಸಹಯೋಗದಲ್ಲಿ 'ವಿದ್ಯಾರ್ಥಿವೇತನ ಕಾರ್ಯಕ್ರಮ' ಆಯೋಜಿಸಿತ್ತು. ಈ ಯೋಜನೆ ಮೂಲಕ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ ಅರ್ಹ 130ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಒಟ್ಟು ರೂ. 25 ಲಕ್ಷಗಳ ವಿದ್ಯಾರ್ಥಿವೇತನ ನೀಡಲಾಯಿತು.


ಪ್ರಸ್ತುತ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ (ಪಿಎಂ ಪೋಷಣ್) ಹೆಸರಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಯಶಸ್ವಿಯಾಗಿ ನಡೆಸುತ್ತಿರುವ ಅಕ್ಷಯ ಪಾತ್ರ ಪ್ರತಿಷ್ಠಾನವು ಈ ಯೋಜನೆಯ ಮೂಲಕ ತನ್ನ ನೆರವಿನ ಹಸ್ತವನ್ನು ಮತ್ತಷ್ಟು ಮುಂದಕ್ಕೆ ಚಾಚಿದೆ. 11 ಅಥವಾ 12ನೇ ತರಗತಿಯ 75 ವಿದ್ಯಾರ್ಥಿಗಳು ಮತ್ತು ಪದವಿ ತರಗತಿಯ 55 ವಿದ್ಯಾರ್ಥಿಗಳ ಪೂರ್ತಿ ಶೈಕ್ಷಣಿಕ ಶುಲ್ಕವನ್ನು ಭರಿಸುವ ಮೂಲಕ ಅವರಿಗೆ ಉನ್ನತ ಶಿಕ್ಷಣ ಪಡೆಯಲು ಅನುವು ಮಾಡಿಕೊಡಲಾಯಿತು.    


ವಿದ್ಯಾರ್ಥಿ ವೇತನ ಕಾರ್ಯಕ್ರಮದಲ್ಲಿ ಸಮಿ-ಸಬಿನ್ಸಾ ಗ್ರೂಪ್‌ನ ಗ್ರೂಪ್ ಎಕ್ಸಿಕ್ಯೂಟಿವ್ ಚೇರ್‌ಪರ್ಸನ್ ಡಾ. ಅಂಜು ಮಜೀದ್, ದಿ ಅಕ್ಷಯ ಪಾತ್ರ ಫೌಂಡೇಶನ್ ನ ಸಿಇಓ ಶ್ರೀಧರ್ ವೆಂಕಟ್ ಮತ್ತು ಅಕ್ಷಯ ಪಾತ್ರ ಫೌಂಡೇಶನ್‌ನ ಕರ್ನಾಟಕ ಪ್ರಾದೇಶಿಕ ವಿಭಾಗದ ಅಧ್ಯಕ್ಷ ಗುಣಕರ ರಾಮ ದಾಸ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top