ಶಾಲೆಯ ಮಕ್ಕಳಿಗೆ ಸ್ಪೋರ್ಟ್ಸ್ ಡ್ರೆಸ್ ನೀಡಿದ ಹಳೆ ವಿದ್ಯಾರ್ಥಿಗಳು

Upayuktha
0


ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗ್ರಾಮದ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳ ಸಂಘದಿಂದ ಅಮರಾವತಿಯಲ್ಲಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ತೆರಳುತ್ತಿರುವ ಶಾಲಾ ಮಕ್ಕಳ ಸ್ಪೋರ್ಟ್ಸ್ ಡ್ರೆಸ್ಸುಗಳನ್ನು ಕೊಡೋ ಮಾಡುವುದರ ಮೂಲಕ ಶಾಲಾ ಅಭಿವೃದ್ಧಿಗೆ ಸಹಕಾರ ನೀಡಿದ್ದಾರೆಂದು ಮುಖ್ಯೋಪಾಧ್ಯಾಯರಾದ ಕೆ ಎಚ್ ಬೆಲ್ಲದ ತಿಳಿಸಿದ್ದಾರೆ.


ಕಳೆದ ವರ್ಷ ಇದೆ ಹಳೆ ವಿದ್ಯಾರ್ಥಿಯ ಗೆಳೆಯರು (ಹಿಂದೆ ಸುಮಾರು 36,000ಗಳ ರೂಪಾಯಿಗಳಲ್ಲಿ whiteboard, ಕೊಡಿಸಿದ್ದ) ಉಳಿದ 7,500 ರೂಪಾಯಿಗಳು, ಜೊತೆಗೆ ತಿಮ್ಮಾಪುರ ಗ್ರಾಮದ ಇದೇ ಶಾಲೆಯ ಹಳೆಯ ವಿದ್ಯಾರ್ಥಿ ಗಿರೀಶ ಸಂಗನಗೌಡ  ದಾದ್ಮಿ ಅವರು 5,000ಗಳನ್ನು ಕೊಡಮಾಡುವುದರ ಮೂಲಕ ಪ್ರೋತ್ಸಾಹ ನೀಡಿದ್ದಾರೆ.


ಇವರಿಗೆ ಹಾಗೂ ಈ ಒಂದು ಕಾರ್ಯಕ್ಕೆ ಸಹಕಾರ ನೀಡಿದ ದಾನಿಗಳಿಗೆ ಶಾಲಾ ಸುಧಾರಣಾ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ಶಾಲೆಯ ಮುಖ್ಯ ಗುರುಗಳು ಮತ್ತು ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ದಾನಿಗಳಿಗೆ ಅಭಿನಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಎಲ್ಲರೂ ಇದೇ ರೀತಿಯ ಸಮಾಜಮುಖಿ ಕೆಲಸಗಳನ್ನು ಮಾಡುವ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವಂತಾಗಲಿ ಎಂದು ಆಶಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top