ಕರಾಟೆ ಚಾಂಪಿಯನ್‌ಶಿಪ್‌: ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು:
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ವಿದ್ಯಾರ್ಥಿನಿ ದೃಶಾನ ಸುರೇಶ್ ಸರಳಿಕಾನ ಜಿಲ್ಲಾಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಎಂಟನೇ ತರಗತಿ ವಿದ್ಯಾರ್ಥಿಯಾಗಿರುವ ದೃಶಾನ ಸುರೇಶ್ ಸರಳಿಕಾನ ಅವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಆ. 8ರಂದು ವಿದ್ಯಾಭಾರತಿ ಜಿಲ್ಲಾ ಮಟ್ಟದ ಕರಾಟೆ 14 ವಯೋಮಿತಿ ಒಳಗಿನ (ಕಿಶೋರ ವರ್ಗ) ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದರು. ಇವರು ಸುರೇಶ್ ಗೌಡ ಸರಳಿಕಾನ ಮತ್ತು ವಿದ್ಯಾಶ್ರೀ ದಂಪತಿಯ ಪುತ್ರಿಯಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top