ಕ್ರಿಮಿನಲ್ ಕಾನೂನುಗಳ ಪರಿಷ್ಕಾರಗಳು ಉತ್ತಮ ಬೆಳವಣಿಗೆ

Upayuktha
0


ಶಿವಮೊಗ್ಗ: ಕ್ರಿಮಿನಲ್ ಕಾನೂನುಗಳ ಹೆಸರಿನ ಬದಲಾವಣೆ ಸೇರಿದಂತೆ ಮಾಡಲಾದ ಪರಿಷ್ಕಾರಗಳು ನಾವು ದಾಸ್ಯದ ಮನೋವೃತ್ತಿಯಿಂದ ಹೊರ ಬರುತ್ತಿರುವುದಕ್ಕೆ ಸಾಕ್ಷಿಯಾಗಿದೆ. ಭಾರತೀಯ ನ್ಯಾಯ ಸಂಹಿತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಭಾರತೀಯ ಸಾಕ್ಷ್ಯ ಅಧಿನಿಯಮಗಳಲ್ಲಿ ಸಾಕಷ್ಟು ಉತ್ತಮ ಬದಲಾವಣೆಗಳಾಗಿದ್ದು ಡಿಜಿಟಲ್ ಎವಿಡೆನ್ಸ್ ಹಾಗೂ ಅಪರಾಧಿ ಕೃತ್ಯಗಳ ತನಿಖೆಯ ವಿಡಿಯೋ ಚಿತ್ರೀಕರಣ ಇತ್ಯಾದಿ ಉತ್ತಮ ಬೆಳವಣಿಗೆಗಳಾಗಿವೆ ಎಂದು ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್ ಎಸ್ ಹೇಳಿದರು.


ಅವರು ಕೇಂದ್ರ ಸಂವಹನ ಇಲಾಖೆ ಮಂಗಳೂರು, ಶ್ರೀ ಧ.ಮ. ಕಾನೂನು ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ನಡೆದ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಎಲ್ಲರಿಗೂ ಕಾನೂನಿನ ಅರಿವು ಅಗತ್ಯ ಹೊಸ ಕಾನೂನುಗಳು ಬಂದಾಗ ಅವುಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಂಡು ಅಗತ್ಯವಿರುವವರಿಗೆ ತಿಳಿಸಿ ಕೊಡುವುದು ನಮ್ಮೆಲ್ಲರ ಕರ್ತವ್ಯ ಎಂದು ಅವರು ಹೇಳಿದರು.


ಅಧ್ಯಕ್ಷತೆ ವಹಿಸಿದ್ದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ತಾರಾನಾಥ್ ಅವರು ಮಾತನಾಡಿ ಮೂರು ಕ್ರಿಮಿನಲ್ ಕಾನೂನುಗಳ ಬಗ್ಗೆ ವಿಸ್ತೃತ ಮಾಹಿತಿ ಒಳಗೊಂಡ ಛಾಯಾಚಿತ್ರಪ್ರದರ್ಶನವನ್ನು ಏರ್ಪಡಿಸಲಾಗಿದ್ದು ಅದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.


ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ  ಶ್ವೇತಾ ಮಾತನಾಡಿ ಹೊಸ ಕ್ರಿಮಿನಲ್ ಕಾನೂನುಗಳು ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಹೆಚ್ಚಿನ ಪಾತ್ರ ವಹಿಸಲಿದೆ ಎಂದರು.


ಕ್ಷೇತ್ರ ಪ್ರಚಾರ ಅಧಿಕಾರಿ ತುಕಾರಾಮಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು ಶ್ರೀಧಮ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಹಾಗೂ ಸಂಯೋಜಕಿ ಶ್ರೀಮತಿ ಅನ್ನಪೂರ್ಣ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಕಾರ್ತಿಕ ಆನಂದ್ ಉಪಸ್ಥಿತರಿದ್ದರು. ಕು. ನೇಹಾ ರಾಮಕೃಷ್ಣನ್  ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top