ಶಿವಮೊಗ್ಗ : ನಗರದ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವೀಸ್ ಸೊಸೈಟಿ (ಎಸ್‌ಎಂಎಸ್‌ಎಸ್ಎಸ್) ಸಂಸ್ಥೆಯ ಸಂಸ್ಥಾಪನ ದಿನದ ಅಂಗವಾಗಿ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಆಗಸ್ಟ್ 11 ರ ಭಾನುವಾರದಂದು ನಗರದ ಬಿ.ಹೆಚ್ ರಸ್ತೆಯಲ್ಲಿರುವ ಸೇಕ್ರೆಡ್ ಹಾರ್ಟ್ ಚರ್ಚ್ ಆವರಣದಲ್ಲಿ ಆಯೋಜಿಸಲಾಗಿದೆ.
ಬೆಳಿಗ್ಗೆ 07:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಈ ಆರೋಗ್ಯ ತಪಾಸಣಾ ಶಿಬಿರವು ನಡೆಯಲಿದೆ. ಶಿಬಿರದಲ್ಲಿ ಜನರಲ್ ಮೆಡಿಸಿನ್, ಓ.ಬಿ.ಜಿ, ಮಕ್ಕಳ ತಜ್ಞರು, ಚರ್ಮರೋಗ ತಜ್ಞರು, ಇಸಿಜಿ, ರಕ್ತ ಪರೀಕ್ಷೆ, ಬಿ.ಪಿ ಮತ್ತು ಸಕ್ಕರೆ ಖಾಯಿಲೆ ಪರೀಕ್ಷೆ, ಸ್ತ್ರೀರೋಗ ಪರೀಕ್ಷೆ, ಕಣ್ಣಿನ ಪರೀಕ್ಷೆ, ಮೂಳೆ ಮತ್ತು ನರರೋಗ ಪರೀಕ್ಷೆಯನ್ನು ನಡೆಸಲಾಗುವುದು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಹಾಗೂ ಸಂಸ್ಥೆಯ ಅಧ್ಯಕ್ಷ ಫ್ರಾನ್ಸಿಸ್ ಸೆರಾವೊ ವಹಿಸಲಿದ್ದಾರೆ. ಬಸವಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಶಿಬಿರದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ನುರಿತ ವೈದ್ಯಾಧಿಕಾರಿಗಳು, ಶಿವಮೊಗ್ಗ ಧರ್ಮಕ್ಷೇತ್ರದ ಪ್ರಧಾನಾಲಯದ ಧರ್ಮಗುರುಗಳಾಗಿರುವ ಸ್ವಾನಿ ಡಿಸೋಜ, ಮೌಂಟ್ ಕಾರ್ಮೆಲ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕ್ಲಿಫರ್ಡ್ ರೋಶನ್ ಪಿಂಟೊ, ಮೇರಿ ಇಮ್ಯಾಕ್ಯುಲೇಟ್ ಕಾನ್ವೆಂಟ್‌ನ ಮುಖ್ಯಸ್ಥೆ ರೀಟಾ ಶಾಂತಿ, ಸಂಸ್ಥೆಯ ನಿರ್ದೇಶಕ ಪಿಯೂಸ್ ಡಿಸೋಜ ಅಂದಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲ್ಲಿದ್ದಾರೆ.
ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಂದು ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 6364351554, 8762137914, 9449623072 ರಲ್ಲಿ ಸಂಪರ್ಕಿಸಲು ಕೋರಲಾಗಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ