ಬಂಟ್ವಾಳ: ಇಲ್ಲಿನ ವಗ್ಗ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಡಬೆಟ್ಟು ಗ್ರಾಮ ಪಿಲಿಂಗಾಲು ಶ್ರೀ ಗಾಯತ್ರೀ ದೇವಿ ದೇವಸ್ಥಾನದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿ 353ನೇ ಆರಾಧನಾ ಮಹೋತ್ಸವ ಬುಧವಾರ ನಡೆಯಿತು.
ಗುರುವರ್ಯರ ವಿಗ್ರಹಕ್ಕೆ ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಮಂತ್ರಾಕ್ಷತೆ ಸಹಿತ ವಿಶೇಷ ಪೂಜೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಇದೇ ವೇಳೆ ಶ್ರೀ ಮಹಾಗಣಪತಿ ಮತ್ತು ಗಾಯತ್ರೀ ದೇವಿಗೆ ವಿಶೇಷ ಪೂಜೆ, ಭಜನೆ ನಡೆಯಿತು.
ದೇವಳದ ಆಡಳಿತ ಧರ್ಮದರ್ಶಿ ಕೆ.ಎಸ್.ಪಂಡಿತ್, ಪ್ರಮುಖರಾದ ಸಿ.ಅನಂತ ಪೈ ವಾಮದಪದವು, ಬಿ.ರಘು ಸಪಲ್ಯ ಪಾಣೆಮಂಗಳೂರು, ನಾಗೇಶ ಕಲ್ಲಡ್ಕ, ಎಂ.ಬೂಬ ಸಪಲ್ಯ ಮುಂಡಬೈಲು, ಕೆ.ಬಾಬು ಸಪಲ್ಯ ವಗ್ಗ, ಭಜನಾ ಸಮಿತಿ ಅಧ್ಯಕ್ಷ ಜಯ ಪೂಜಾರಿ, ಸತೀಶ ಸಪಲ್ಯ ಬಂಟ್ವಾಳ, ಮೋಹನ್ ಕೆ. ಶ್ರೀಯಾನ್ ರಾಯಿ, ಜಗದೀಶ ಕುಂದರ್, ಚಿದಾನಂದ ನಾಯ್ಕ್ ಪಿಲಿಂಗಾಲು, ವೇದವ ಗಾಣಿಗ, ದಿನೇಶ ಬೋಳಂತೂರು ಮತ್ತಿತರರು ಪಾಲ್ಗೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ