ಬಂಟ್ವಾಳ: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರವು ಹಂಚಿಕೆ ಮಾಡಲಾದ ನಿವೇಶನಗಳ ಆಕ್ರಮಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರ ಇರುವುದರ ಬಗ್ಗೆ ಅನೇಕ ಜನ ದೂರುದಾರರು ರಾಜ್ಯ ಪಾಲರಿಗೆ ದೂರು ನೀಡಿದ್ದಾರೆ. ಆ ಹಿನ್ನಲೆಯಲ್ಲಿ ಹಾಗೂ ದೂರುದಾರರು ಸಲ್ಲಿಸಿದ ದಾಖಲೆಗಳಿಂದ ಮೇಲ್ನೋಟಕ್ಕೆ ಮುಖ್ಯಮಂತ್ರಿ ಭಾಗಿಯಾಗಿರುವುದು ಕಂಡು ಬಂದ ಕಾರಣ ರಾಜ್ಯಪಾಲರು ಕಾನೂನು ತಜ್ಞರೊಂದಿಗೆ ಚರ್ಚಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ರಾಜ್ಯದ ಸಾರ್ವತ್ರಿಕ ಹಿತದೃಷ್ಠಿಯಿಂದ ಸ್ವಾಗಾತಾರ್ಹ. ಕಾಂಗ್ರೆಸ್ ಪಕ್ಷವು ಇದನ್ನು ಖಂಡಿಸಿ ಹೇಳಿಕೆ ಮತ್ತು ಪ್ರತಿಭಟನೆ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಸದಸ್ಯ ಪ್ರಭಾಕರ ಪ್ರಭು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಕ್ಷಣದಿಂದಲೇ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು. ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯೂಡಿಯೂರಪ್ಪನವರು ಅನುಸರಿಸಿದ ಹಾದಿಯನ್ನು ಅನುಸರಿಸಿ, ಅವರಿಗೆ ಮಾದರಿಯಾಗಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದೂರು ನೀಡಿರುವ ಇದೇ ಅಬ್ರಹಾಂ ನನ್ನು ಒಂದು ಕಾಲದಲ್ಲಿ ಇದೇ ಸಿದ್ದರಾಮಯ್ಯನವರು ಹೊಗಳಿ ಇಂತಹ ಸಾಮಾಜಿಕ ಕಾರ್ಯಕರ್ತರು ಸಮಾಜಕ್ಕೆ ಅವಶ್ಯಕ ಎಂದಿದ್ದರು. ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ರವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್ ಯೂಡಿಯೂರಪ್ಪ ಅವರ ವಿರುದ್ದ ಇದೇ ಮಾದರಿಯಲ್ಲಿ ತನಿಖೆಗೆ ಅನುಮತಿ ನೀಡಿದಾಗ ರಾಜ್ಯಪಾಲರ ಕ್ರಮ ಸಾಂವಿಧಾನಿಕ ಕ್ರಮ ಎಂದು ಸ್ವಾಗತಿಸಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಆದರೆ ತನ್ನ ಮೇಲೆ ತನಿಖೆಗೆ ಅನುಮತಿ ನೀಡಿದಾಗ ಮಾತ್ರ ಈಗಿನ ರಾಜ್ಯಪಾಲರು ಸರಿಯಿಲ್ಲ, ಕೇಂದ್ರ ಸರಕಾರದ ಕೈಗೊಂಬೆ ಎಂದು ಹೇಳುತ್ತಿರುವುದು ಮುಖ್ಯಮಂತ್ರಿ ಸ್ಥಾನಕ್ಕೆ ತಕ್ಕುದಲ್ಲ. ಈ ರೀತಿಯಲ್ಲಿ ತನಗೆ ಬೇಕಾದ ಹಾಗೆ ಸಂದರ್ಭೋಚಿತವಾಗಿ ಅಲ್ಲಲ್ಲಿ ಮಾತಾನಾಡುತ್ತಿರುವುದು ರಾಜ್ಯದ ಜನತೆಗೆ ಅರ್ಥವಾಗುತ್ತಿದ್ದೂ ಮುಂದಿನ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದೂ ಪ್ರಭು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ