ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆಯ ಪ್ರತಿಯೊಂದು ವಾರ್ಡ್ಗಳಿಗೆ (ಒಟ್ಟು 39 ವಾರ್ಡ್‌ಗಳಿಗೆ) ವಾರ್ಡ್ ಸಮಿತಿ ರಚಿಸುವ ಕುರಿತು ಆಸಕ್ತ ಸಂಘ ಸಂಸ್ಥೆಗಳ ಪ್ರತಿನಿದಿ ಮತ್ತು ಸಾರ್ವಜನಿಕರಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.39 ವಾರ್ಡ್‌ಗಳಿಗೆ ಪೂರ್ಣ ಪ್ರಮಾಣದಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ, ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಗಿ, ಪುನ: ಅರ್ಜಿ ಆಹ್ವಾನಿಸಲಾಗಿದೆ. ವಾರ್ಡ್ ಸಮಿತಿ ಸದಸ್ಯರನ್ನಾಗಿ ಆಯ್ಕೆಯಾಗಲು ಆಸಕ್ತ ಸಂಘ ಸಂಸ್ಥೆಯ ಪ್ರತಿನಿಧಿ ಮತ್ತುಸಾರ್ವಜನಿಕರು ಪಾಲಿಕೆಯ ಕಚೇರಿಗೆ ಅರ್ಜಿ ಸಲ್ಲಿಸಬೇಕು.
ಸೂಚನಾ ಫಲಕಕ್ಕೆ ಪ್ರಕಟಿಸಿದ ವಾರ್ಡ್ ಸಮಿತಿ ಸದಸ್ಯರ ಆಯ್ಕೆಯ ಪ್ರಕಟಣೆಯ ಷರತ್ತುಗಳ ಪ್ರಕಾರ ಸಂಬಂಧಿಸಿದ ದಾಖಲೆಗಳೊಂದಿಗೆ ಸೆ.15 ರಂದು ಸಜೆ 05 ಗಂಟೆಯ ಅವಧಿಯೊಳಗೆ, ವಲಯ, ಗಾಂಧಿನಗರದಲ್ಲಿ, ಸಲ್ಲಿಸಬೇಕು. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-1 ಅಥವಾ ವೆಬ್‌ಸೈಟ್ ನ್ನು ಸಂಪರ್ಕಿಸ ಬಹುದು ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ