ಬಳ್ಳಾರಿ: ಕರ್ನಾಟಕ ರಾಜ್ಯ ಬಿಜೆಪಿ ಯುವ ಮೋರ್ಚಾ ಸದಸ್ಯತ್ವ ಅಭಿಯಾನದ ಕಾರ್ಯಾಗಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರಭಾರಿಗಳಾದ ನಂದೀಶ್ ರೆಡ್ಡಿ ಜೀ, ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ಜೀ, ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೀಪ್ ರವಿ ಜೀ ಅವರು ಕಾರ್ಯಾಗಾರವನ್ನು ನಡೆಸಿಕೊಟ್ಟರು.
ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷರಾದ ಅಮರೇಶ್ ನಾಯ್ಕ್ ರೈತನಗರ ಅವರು ನಿರೂಪಿಸಿದರು. ಯುವ ಮೋರ್ಚಾ ರಾಜ್ಯ ಪದಾಧಿಕಾರಿಗಳು, ಯುವ ಮೋರ್ಚಾ ಎಲ್ಲಾ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತಿ ಇದ್ದರು ಎಂದು ಬಳ್ಳಾರಿ ಯುವಮೋರ್ಚ ಜಿಲ್ಲಾಧ್ಯಕ್ಷ ಎಂ.ಎಸ್.ಸಿದ್ದಪ್ಪನವರು ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ