ಬಳ್ಳಾರಿ:ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ವತಿಯಿಂದ ವಿಶೇಷ ಅಂದೋಲನದಡಿ ಆಹಾರ ಸುರಕ್ಷತೆ ಅಧಿಕಾರಿಗಳು ನಗರದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಬೀದಿ ಬದಿ ತಿಂಡಿ-ದಿನಸಿ ವ್ಯಾಪಾರಿಗಳ, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಆಹಾರ ಮತ್ತು ಗುಣಮಟ್ಟದ ಕುರಿತು ಶುಕ್ರವಾರ ತಪಾಸಣೆ ನಡೆಸಿದರು.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ರ ಅಂಶಗಳನ್ನು ಪಾಲಿಸದೇ ಇರುವ ಹಾಗೂ ಆಹಾರ ನಿರ್ವಾಹಕರ ವೈಯಕ್ತಿಕ ಸ್ವಚ್ಛತೆ, ಆಹಾರದಲ್ಲಿ ಬಳಸುತ್ತಿರುವ ಕೃತಕ ಬಣ್ಣ, ಅಜಿನೋಮೋಟೊ (ಟೇಸ್ಟಿಂಗ್ ಪೌಡರ್), ಆಹಾರ ತಯಾರಿಸಲು ಬಳಸುತ್ತಿರುವ ನೀರು, ಗ್ರಾಹಕರಿಗೆ ಕುಡಿಯಲು ನೀಡುತ್ತಿರುವ ನೀರು ಮತ್ತು ನೋಂದಣಿ ಅಥವಾ ಪರವಾನಿಗೆ ಪಡೆದಿರುವ ಮಾಹಿತಿ ಕಲೆ ಹಾಕಿದರು. ‘ಹತ್ತು ಆಹಾರ ಪದಾರ್ಥಗಳ ಮಾದರಿಗಳ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ವಿಶ್ಲೇಷಣೆಗಾಗಿ ಆಹಾರ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ವಿಶ್ಲೇಷಣಾ ವರದಿ ಬಂದ ನಂತರ ಆಹಾರ ಸುರಕ್ಷತೆ ಮತ್ತುಗುಣಮಟ್ಟ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಆಹಾರ ಸುರಕ್ಷತೆ ಅಧಿಕಾರಿ ನಂದಾಕಡಿ ಅವರು ಹೇಳಿದರು.
ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತಾ ಅಧಿಕಾರಿ ಪ್ರಕಾಶ್.ಎಸ್‌ಪುಣ್ಯಶೆಟ್ಟಿ ಅವರ ಆದೇಶದ ಮೇರೆಗೆ ತಪಾಸಣೆ ಸಮಯದಲ್ಲಿ ಕಂಡುಬಂದ ಲೋಪಗಳಿಗೆ ನಿಯಮಾನುಸಾರ ತಿಳುವಳಿಕಯ ಪತ್ರವನ್ನು ಆಹಾರ ಉದ್ದಿಮೆದಾರರಿಗೆ ನೀಡಲಾಗಿದ್ದು, ದಂಡ ಸಹ ವಿಧಿಸಲಾಗಿದೆ. ಭೇಟಿ ನೀಡಿದ ಸಂದರ್ಭದಲ್ಲಿ ಕಂಡುಬಂದ ಲೋಪದೋಷಗಳನ್ನು ಒಂದು ವಾರದೊಳಗೆ ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.ಈ ವೇಳೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ