ಬೆಂಗಳೂರು: ನೃತ್ಯ ಕುಟೀರ ಸೆಂಟರ್ ಆಫ್ ಪರ್ಫಾಮಿಂಗ್ ಆರ್ಟ್ಸ್ ಸಂಸ್ಥೆಯು ತನ್ನ 20ನೇ ವರ್ಷದ ವಾರ್ಷಿಕೋತ್ಸವವನ್ನು "ನೃತ್ಯ ವಿಂಶತಿ" ಎಂಬ ಶೀರ್ಷಿಕೆಯಲ್ಲಿ, ನಗರದ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಆಗಸ್ಟ್ 31, ಶನಿವಾರ ಬೆಳಿಗ್ಗೆ 10-00 ಗಂಟೆಗೆ ಆಯೋಜಿಸಿದೆ.
ಈ ಸಂಭ್ರಮದ ಮೊದಲ ಕಾರ್ಯಕ್ರಮವಾಗಿ ಸಂಸ್ಥೆಯ ಕಿರಿಯ ಮಕ್ಕಳು ಭಾಗವಹಿಸಲಿದ್ದು, ಹಲವು ವಿಭಿನ್ನ ನೃತ್ಯಗಳನ್ನು ಪ್ರಸ್ತುತ ಪಡಿಸುತ್ತಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ವಿಜಯ್ ಬೆಣಚ (ಪ್ರಸಾಧನ ಕಲಾವಿದರು ಹಾಗು ಕಲಾ ನಿರ್ದೇಶಕರು), ಮತ್ತು ಶ್ರೀಮತಿ ಉಷಾ ಬಸಪ್ಪ ( ನೃತ್ಯ ಗುರುಗಳು, ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿಯ ಸದಸ್ಯೆ) ಆಗಮಿಸಲಿದ್ದಾರೆ ಎಂದು ಸಂಸ್ಥೆಯ ನಿರ್ದೇಶಕಿ ದೀಪಾ ಭಟ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ