ಬಾಗಲಕೋಟೆ: ಮಾಜಿ ಸಚಿವ ಎಸ್ಆರ್ ಪಾಟೀಲ್ ಅವರ ನೇತೃತ್ವದ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಸಕ್ಕರೆ ಕಾರ್ಖಾನೆಗೆ ದಕ್ಷಿಣ ಭಾರತ ಕಬ್ಬು ಮತ್ತು ಸಕ್ಕರೆ ತಂತ್ರಜ್ಞಾನ ಸಂಸ್ಥೆ( ಸಿಸಾ) ಕೊಡ ಮಾಡಿಡುವ, ಅತ್ಯುತ್ತಮ ತಾಂತ್ರಿಕ ಶ್ರೇಷ್ಠತಾ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಖಾನೆಯ ಪರವಾಗಿ ಸುರೇಶ ಗೌಡ ಪಾಟೀಲ, ರಾಹುಲ ನಾಡಗೌಡ ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಲಭಿಸಿದ್ದಕ್ಕೆ ಮಾಜಿ ಸಚಿವ ಎಸ್ ಆರ್ ಪಾಟೀಲ ಅವರು ಅತೀವ ಸಂತಸ ವ್ಯಕ್ತಪಡಿಸಿದ್ದು ಇದು ಸಂಸ್ಥೆಗೆ ಬಂದ ಗೌರವವಾಗಿದೆ; ಸಿಬ್ಬಂದಿ ಹಾಗೂ ಆಡಳಿತ ಮಂಡಳಿಯ ಪರಿಶ್ರಮದ ಫಲವಾಗಿ ಪ್ರಶಸ್ತಿ ಲಭಿಸಿದೆ ಎಂದು ಹೇಳಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ