ಪಡುಬಿದ್ರೆ-ಕಾರ್ಕಳ ಟೋಲ್ ಗೇಟ್ ವಿರುದ್ಧ ಪ್ರತಿಭಟನೆಗೆ ಬಸ್ ಮಾಲಕರ ಸಂಘ ಬೆಂಬಲ

Upayuktha
0

ಮಂಗಳೂರು: "ಪಡುಬಿದ್ರೆ-ಕಾರ್ಕಳ ಹೆದ್ದಾರಿಯಲ್ಲಿ ಕಂಚಿನಡ್ಕ ಬಳಿ ಟೋಲ್ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮವನ್ನು ಕೆನರಾ ಬಸ್ ಮಾಲಕರ ಅಸೋಸಿಯೇಷನ್ ಖಂಡಿಸುತ್ತಿದ್ದು ಇದರ ವಿರುದ್ಧ ಯಾವುದೇ ರೀತಿಯ ಪ್ರತಿಭಟನೆಗೆ ಸಂಘಟನೆ ಸಿದ್ಧವಾಗಿದೆ" ಎಂದು ಸಂಘಟನೆಯ ಖಜಾಂಚಿ ಜ್ಯೋತಿಪ್ರಸಾದ್ ಹೆಗ್ಡೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.


”ಕೇಂದ್ರ ಸರಕಾರದ ನಿಯಮಗಳ ಅನ್ವಯ ಹೆದ್ದಾರಿಯಲ್ಲಿ 60 ಕಿಮೀ ಅಂತರದಲ್ಲಿ ಟೋಲ್ ಗೇಟ್ ನಿರ್ಮಾಣ ಮಾಡಲು ಅವಕಾಶವಿಲ್ಲ. ಆದರೆ ಹೆಜಮಾಡಿ ಟೋಲ್ ಗೇಟ್ ಇಲ್ಲಿಂದ 6 ಕಿಮೀ ದೂರದಲ್ಲಿದ್ದು ಇದರಿಂದ ಸಾರ್ವಜನಿಕರಿಗೆ ಭಾರೀ ಹೊರೆ ಬೀಳಲಿದೆ. 2018ರಲ್ಲಿ ಬೆಳ್ಮಣ್ ಬಳಿ ಇದೇ ರೀತಿ ಟೋಲ್ ನಿರ್ಮಾಣಕ್ಕೆ ಮುಂದಾದಾಗ ನಾವು ಉಗ್ರ ಪ್ರತಿಭಟನೆ ನಡೆಸಿದ್ದೆವು. ಆಗ ಇಲ್ಲಿಂದ ಹೋಗಿದ್ದ ಟೋಲ್ ಮತ್ತೆ ಕಂಚಿನಡ್ಕ ಬಳಿ ತೆರೆಯಲು ಮುಂದಾಗಿದೆ. ಇದು ರಾಜ್ಯ ಹೆದ್ದಾರಿ ಆಗಿರುವ ಕಾರಣ ಜನರನ್ನು ಯಾಮಾರಿಸಲು ಸರಕಾರ ಮುಂದಾಗಿದೆ” ಎಂದವರು ಆರೋಪಿಸಿದರು. 


ಉಪಾಧ್ಯಕ್ಷ ದುರ್ಗಾ ಪ್ರಸಾದ್ ಹೆಗ್ಡೆ ಮಾತನಾಡಿ, “ಮುಂದೆ ಬರಲಿರುವ ಟೋಲ್ ನಲ್ಲಿ ದ್ವಿಚಕ್ರ ವಾಹನಗಳಿಗೆ 30 ರೂ. ಮತ್ತು ಕಾರ್ ಗಳಿಗೆ 50 ರೂ., ಬಸ್ ಗಳಿಗೆ 100 ರೂ.  ಸುಂಕ ವಸೂಲಿ ಮಾಡಲು ಮುಂದಾಗಿದೆ. ಇದರ ವಿರುದ್ಧ ಆಗಸ್ಟ್ 24ರಂದು ಪ್ರತಿಭಟನೆ ನಡೆಯಲಿದ್ದು ಇದಕ್ಕೆ ಬಸ್ ಮಾಲಕರ ಸಂಘ ಬೆಂಬಲ ನೀಡುತ್ತದೆ” ಎಂದು ಅವರು ಹೇಳಿದರು. 


ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ಕೋಶಾಧಿಕಾರಿ ಪ್ರಸಾದ್ ಹೆಗ್ಡೆ, ಸದಸ್ಯ ಜಯರಾಮ ಶೆಟ್ಟಿ, ಉಪಾಧ್ಯಕ್ಷ ಜೀವಂಧರ್ ಅಧಿಕಾರಿ, ಮತ್ತಿತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top