ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಕೋಚಿಂಗ್ ಕ್ಲಾಸ್ ಉದ್ಘಾಟನೆ

Upayuktha
0


ಅಡ್ಯನಡ್ಕ: ಇಲ್ಲಿನ ಜನತಾ ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ತರಬೇತಿ ನೀಡುವ ಸಲುವಾಗಿ ನಡೆಸುವ ವಿಶೇಷ ತರಗತಿಗಳನ್ನು ಆಗಸ್ಟ್ 10ರಂದು ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.


ವಿದ್ಯಾರ್ಥಿಗಳಿಗೆ ಸಿಇಟಿ ಅಧ್ಯಯನ ಸಾಮಗ್ರಿ ಪುಸ್ತಕಗಳನ್ನು ಇದೇ ವೇಳೆ ಅಧ್ಯಕ್ಷರಾದ ಗೋವಿಂದ ಪ್ರಕಾಶ್ ಸಾಯ ಹಾಗೂ ಸಂಚಾಲಕರಾದ ಡಾ. ಅಶ್ವಿನಿ ಕೃಷ್ಣಮೂರ್ತಿ ಅವರು ವಿತರಿಸಿ ಶುಭ ಹಾರೈಸಿದರು.


ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿಗಳಾದ ರಮೇಶ್ ಎಂ. ಬಾಯಾರು, ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಶ್ರೀನಿವಾಸ್, ಜೀವಶಾಸ್ತ್ರ ಉಪನ್ಯಾಸಕ ರವಿಕುಮಾರ್ ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಗಣಿತಶಾಸ್ತ್ರ ಉಪನ್ಯಾಸಕರಾದ ಗಣೇಶ್ ಕೆ. ಆರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top