ಬಳ್ಳಾರಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಬ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಸಿ.ಎಂ.ಸಿದ್ದರಾಮಯ್ಯ ಅವರು ಕೂಡಲೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೋಲಾರದ ಮಾಜಿ ಸಂಸದ ಮುನಿಸ್ವಾಮಿ ಅವರು ಒತ್ತಾಯಿಸಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುಳ್ಳು ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮಿತಿಮೀರಿದೆ, ಪ್ರತಿ ಹಂತದಲ್ಲೂ ಅಕ್ರಮ ತಾಂಡವಾಡುತ್ತಿದೆ, ಇಂತಹ ಅತ್ಯಂತ ಕೆಟ್ಟ ಸರ್ಕಾರವನ್ನು ಎಂದೂ ನೋಡಿಯೇ ಇಲ್ಲ, ವರ್ಗಾವಣೆ ದoಧೆಯಲ್ಲಿ ಅಧಿಕಾರಿಗಳಿಂದ ಕೋಟಿ ಕೋಟಿ ಹಣ ಲೂಟಿ ಹೊಡೆಯಲಾಗುತ್ತಿದೆ,
ಪ್ರತಿ ಹುದ್ದೆಗೆ ಇಂತಿಷ್ಟು ಹಣ ನಿಗದಿ, ಅಧಿಕಾರಿಗಳಿಂದ ಈ ತರಹ ಹಣ ಸಂಗ್ರಹಿಸಿದರೆ ಜನರ ಪರವಾಗಿ ಹೇಗೆ ಕೆಲಸ ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ಬೆಸತ್ತಿದ್ದು, ಬಡವರ ನೆಮ್ಮದಿಯನ್ನು ಕಾಂಗ್ರೆಸ್ ಸರ್ಕಾರ ಕಸಿದುಕೊಂಡಿದೆ. ಈ ಹಿಂದೆ ರೈತರು ವಿದ್ಯುತ್ ಪರಿವರ್ತಕ ಬದಲಾಯಿಸಲು 40 - 50 ಸಾವಿರ ಖರ್ಚಾಗುತ್ತಿತ್ತು. ಆದರೆ, ಈಗ 4 ಲಕ್ಷ ಭರಿಸಬೇಕಾಗಲಿದೆ, ನೋಂದಣಿ ಶುಲ್ಕ ದುಪ್ಪಟ್ಟು, ರೈತರ ಪಹಣಿ ದರ ಏರಿಕೆ, ರೈತರು ಸರ್ವೆ ಮಾಡಿಸಲು ತೆರಳಿದರೆ ಅದನ್ನು ನಾಲ್ಕು ಪಟ್ಟು ದರ ಹೆಚ್ಚಿಸಲಾಗಿದೆ, ಹಾಲು ಉತ್ಪಾದಕರಿಗೂ ಸರ್ಕಾರ ಮೋಸ ಮಾಡಿದೆ, ಕೂಡಲೇ ಸಿ.ಎಂ.ಸಿದ್ದರಾಮಯ್ಯ ಅವರು, ಸರ್ಕಾರವನ್ನು ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿದರು.
ಅಕ್ರಮ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಖಂಡಿಸಿದರೆ ಒಬಿಸಿ, ಅಹಿಂದ ಅಂತೀರಾ ಕಾಂಗ್ರೆಸ್ ನಾಯಕರು ಜಾತಿ ಬಳಸಿಕೊಳ್ಳುವುದನ್ನು ಕೂಡಲೇ ಕೈಬಿಡಬೇಕು, ನಾವು ಯಾವುದೇ ಜಾತಿಯ ವಿರೋಧಿಗಳಲ್ಲ, ನಾವು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅವಧಿಯಲ್ಲಿ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಮೂಡಾ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಸಿ.ಎಂ.ಸಿದ್ದರಾಮಯ್ಯ ಅವರ ವಿರುದ್ಧ ಕಾನೂನಾತ್ಮಕವಾಗಿ ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದರೆ, ಅವರ ಬಗ್ಗೆ ಹಗುರವಾಗಿ ಮಾತನಾಡಿ, ಅವಾಶ್ಚ ಶಬ್ದಗಳಿಂದ ನಿಂದಿಸಿದ್ದಾರೆ, ಇದು ಸರೀನಾ, ಅವರು ಒಬ್ಬ ದಲಿತ ನಾಯಕರು, ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ.
ನಾವು ಕೈ ನಾಯಕರ ವಿರುದ್ಧ ಪೋಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದೇವೆ. ಮೂಡಾ ಪ್ರಕರಣದ ನೈತಿಕ ಹೊಣೆ ಹೊತ್ತು ಕೂಡಲೇ ಸಿ.ಎಂ.ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು, ನಮ್ಮ ಹೋರಾಟ ಇಲ್ಲಿಗೆ ನಿಲ್ಲೊಲ್ಲ, ಸಿ.ಎಂ.ರಾಜೀನಾಮೆ ನೀಡುವವರೆಗೆ ಹೋರಾಟ ನಿರಂತರ ನಡೆಯಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಡಾ.ಮಹಿಪಾಲ್, ರಾಘವೇಂದ್ರ ಯಾದವ್, ಡಾ.ಬೀ.ಕೆ.ಸುಂದರ್, ಎಚ್.ಓಬಳೇಶ್, ಎಂ.ಎಸ್.ಸಿದ್ದಪ್ಪ, ಗಣಪಲ್ ಐನಾಥ ರೆಡ್ಡಿ, ಎಚ್.ಹನುಮಂತಪ್ಪ ಇತರರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ