ಬಳಿಕ ಗಂಟೆ 11:30 ಕ್ಕೆ ಸ್ನೇಹಾಲಯದ ಸಭಾಂಗಣದಲ್ಲಿ ಪುಟ್ಟ ಸಭಾ ಕಾರ್ಯಕ್ರಮ ನಡೆಯಿತು. ಈ ಕಾರ್ಯದ ಮುಖ್ಯ ಅತಿಥಿಯಾಗಿ ಅತೀ ವಂದನೀಯ ಸ್ವಾಮಿ ಅಲೋಶಿಯಸ್ ಪಾವ್ಲ್ ಡಿ ಸೋಜಾ ಅಂತೆಯೇ ಗೌರವ ಅತಿಥಿಗಳಾಗಿ ಸ್ಟೀಫನ್ ಪಿಂಟೋ, ಎಡ್ಯುಕೇರ್ ಸಂಯೋಜಕರು,ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಸಮಾಜ ಕಾರ್ಯಕರ್ತ ಮತ್ತು ಸಂಗೀತ ಸಂಯೋಜಕ ಓಸ್ವಾಲ್ಡ್ ಡಿಸೋಜಾ ಸಂಪಿಗೆ, ಡಿಎಎಂ ಆಯುರ್ವೇದ ರತ್ನ ಡಾ.ಮಹಮ್ಮದ್ ಶಾಲಿಮಾರ್, ಕ್ಷೇತ್ರ ಅರಸು ಮಂಜೀಷ್ಣಾರ ಉದ್ಯಾವರ, ಮಾಡ ಇದರ ಮುಖ್ಯಸ್ಥ ರಾಜಾ ಬೆಳ್ಚಡ, ಸ್ಟ್ಯಾನಿ ಬೇಳಾ, ಪ್ರೊಡಕ್ಷನ್ ಡೈರೆಕ್ಟರ್, ಡೈಜಿವರ್ಲ್ಡ್ ಟಿವಿ, ಅಲ್ವಿನ್ ಡಿಸೋಜಾ, ಅಧ್ಯಕ್ಷರು, ಕೆಥೋಲಿಕ್ ಸಭಾ, ಮಂಗಳೂರು ಧರ್ಮಪ್ರಾಂತ್ಯ, ಮಂಜೇಶ್ವರ ಚರ್ಚಿನ ಧರ್ಮಗುರು ಗಳಾದ ವಂದನೀಯ ಸ್ವಾಮಿ ಎಡ್ವಿನ್ ಪಿಂಟೋ, ಸ್ನೇಹಾಲದ ಆಧ್ಯಾತ್ಮಿಕ ನಿರ್ದೇಶಕ ವಂದನೀಯ ಸ್ವಾಮಿ ಸಿರಿಲ್ ಡಿಸೋಜಾರವರು ಉಪಸ್ಥಿತರಿದ್ದು ಪ್ರತಿಯೊಬ್ಬ ಗಣ್ಯ ಅಥಿತಿಯರು ತಮ್ಮ ಹಿತ ನುಡಿಗಳಿಂದ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ವಂದನೀಯ ಸ್ವಾಮಿ ಅಲೋಶಿಯಸ್ ಪಾವ್ಲ್ ಡಿಸೋಜಾರವರು ಸ್ನೇಹಾಲಯಕ್ಕೆ ನೀಡಿದ ಸಹಾಯವನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು. ಅಂತೆಯೇ ರವಿ ನಾಯ್ಕಾಪು ಮತ್ತು ಮದರ್ ತೆರೆಸಾರವರ ಗ್ರೊಟ್ಟೊ ಇದರ ದಾನಿಗಳನ್ನು ಸನ್ಮಾನಿಸಲಾಯಿತು.
ಸ್ನೇಹಾಲಯ ವ್ಯಸನ ಮುಕ್ತಿ ಕೇಂದ್ರದ ಧನ ಸಹಾಯಕ್ಕಾಗಿ ಏರ್ಪಡಿಸಿದ ಲಕ್ಕಿಡಿಪ್ ಇದರ 'ಡ್ರಾ' ಈ ಸಂಧರ್ಬದಲ್ಲಿ ನಡೆಯಿತು. ಸ್ನೇಹಾಲಯದ ಸಂಸ್ಥಾಪಕರಾದ ಸಹೋದರ ಜೋಸೆಫ್ ಕ್ರಾಸ್ತಾ ಸ್ವಾಗತದ ಸವಿನುಡಿಗಳನ್ನಾಡಿದರು. ಅಂತೆಯೇ ಶ್ರೀಮತಿ ಒಲಿವಿಯಾ ಕ್ರಾಸ್ತಾರವರು ಧನ್ಯವಾದ ಸಮರ್ಪಣೆ ನೆರವೇರಿಸಿದರು. ಜಿಯೋ ಅಗ್ರಾರ್ ಮತ್ತು ವಿಯೊಲಾ ಇವರು ಕಾರ್ಯಕ್ರಮದ ನಿರೋಪಣೆಯನ್ನು ಮಾಡಿದರು. ಸ್ನೇಹಾಲಯದ ಹದಿನೈದನೆ ವರ್ಷದ ಈ ಸಂಭ್ರಮಾಚರಣೆಯು ಸಹಭೋಜನದೊಂದಿಗೆ ಮುಕ್ತಾಯಗೊಂಡಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ