ಹತಾಶ ಕಾಂಗ್ರೆಸಿಗರಿಂದ ಕಾನೂನು ಸುವ್ಯವಸ್ಥೆ ಹದಗೆಡಿಸಲು ಯತ್ನ: ನಳಿನ್ ಆರೋಪ

Upayuktha
0



ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ.


ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್, ಮೂಡಾ ಹಗರಣದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ ಆಂಟಿ ಕುಳಿತುಕೊಂಡಿದ್ದಾರೆ. ಸಿದ್ದರಾಮಯ್ಯನವರು ನೈತಿಕತೆ ಇದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ಎಂದು ಸವಾಲು ಹಾಕಿದರು.


ಹೋರಾಟದ ನೆಪದಲ್ಲಿ ಕಾಂಗ್ರೆಸ್ ಆರಾಜಕತೆ ಸ್ರಷ್ಟಿಸಲು ಪ್ರಯತ್ನಿಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಡಳು ಕಾರಣವಾಗುತ್ತಿದೆ. ರಾಜ್ಯಪಾಲರ ನಡೆ ಸಮರ್ಥನೀಯವಾಗಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರನ್ನು ನಿಂದಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top