ಉಜಿರೆ: ಎಸ್‌ಡಿಎಂ ಪದವಿಪೂರ್ವ ಕಾಲೇಜಿನಲ್ಲಿ ಕೇಂದ್ರ ಬಜೆಟ್ ಚರ್ಚೆ, ವಿಶೇಷ ಮಾಹಿತಿ ಶಿಬಿರ

Upayuktha
0


ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾ ಭಿವೃದ್ದಿ ವಿಭಾಗದ ವಿಸ್ತೃತ ಚಟುವಟಿಕೆಯ ಅಂಗವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕೇಂದ್ರ ಸರ್ಕಾರದ ಬಜೆಟ್ ಮೇಲಿನ ಚರ್ಚೆ ಹಾಗೂ ವಿಶೇಷ ಮಾಹಿತಿ ಶಿಬಿರ ನಡೆಯಿತು. 


ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ ಮುಖ್ಯಸ್ಥ ಡಾ. ಗಣರಾಜ್. ಕೆ ಅವರು ಕೇಂದ್ರ ಬಜೆಟಿನ ಮುಖ್ಯಾಂಶಗಳ ಬಗ್ಗೆ ವಿಸ್ತೃತವಾಗಿ ತಿಳಿಸಿದರು. 


ತೃತೀಯ ಬಿ.ಎ ವಿದ್ಯಾರ್ಥಿಗಳಾದ ಸಿಂಚನಾ ಭಾರತೀ, ಸಮೀರ್ ಹಾಗೂ ವೀಕ್ಷಾ ಅವರು ಬಜೆಟ್‌ನಲ್ಲಿ ಪ್ರಸ್ತಾಪಿತ ಶೈಕ್ಷಣಿಕ, ಉದ್ಯೋಗ ಹಾಗೂ ಕೌಶಲ್ಯ, ತಂತ್ರಜ್ಞಾನ, ಉದ್ಯೋಗ, ಕೃಷಿ, ಕೈಗಾರಿಕೆ ಇತ್ಯಾದಿ ಪ್ರಮುಖ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು. ವಿದ್ಯಾರ್ಥಿಗಳಿಂದ ಚರ್ಚೆ ಕೂಡ ನಡೆಯಿತು. 


ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ರಾ.ಸೇ ಯೋಜನೆಯ ಸಹ ಯೋಜನಾಧಿಕಾರಿ ಹಾಗೂ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿ ಪದ್ಮಶ್ರೀ ರಕ್ಷಿತ್ ಅವರು ಸ್ವಾಗತಿಸಿ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top