ಪುತ್ತೂರು: ವಿದ್ಯಾಭಾರತಿ ಹಾಗೂ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ 45 ಕೆ ಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ದ್ವಿತೀಯ ಪಿ.ಯು. ವಿದ್ಯಾರ್ಥಿ ವಂಶಿಕ್ ರೈ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದು ಕೊಂಡಿರುತ್ತಾರೆ.
ಇವರು ಪುತ್ತೂರಿನ ಶಶಿಧರ ರೈ ಮತ್ತು ರವಿಕಲಾ ರೈ ದಂಪತಿ ಪುತ. ಅಂತೆಯೇ ನರಿಮೊಗರಿನ ಉಮೇಶ್ ರೈ ಮತ್ತು ಮಲ್ಲಿಕಾ ಲತಾ ಜಿ ದಂಪತಿ ಪುತ್ರ, ದ್ವಿತೀಯ ಪಿ.ಯು. ವಿದ್ಯಾರ್ಥಿ ನಿಶಾಂತ್ ರೈ 50 ಕೆ ಜಿ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಸಂಸ್ಥೆಯಲ್ಲಿ ಈ ಸ್ಪರ್ಧೆಗಳು ನಡೆದವು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ