ಗೋವಿಂದ ದಾಸ ಕಾಲೇಜ್‌ : ಹ್ಯಾಪಿನೆಸ್ ಫಾರ್ ಯೂತ್ ಕಾರ್ಯಕ್ರಮ

Upayuktha
0


ಸುರತ್ಕಲ್‌: ವಿದ್ಯಾರ್ಥಿಗಳಿಗೆ ಮನಸ್ಸು ಹಾಗೂ ಮಾನಸಿಕ ಒತ್ತಡಗಳ ನಿರ್ವಹಣೆಗೆ ಸೂಕ್ತ ತರಬೇತಿಗಳು ಅಗತ್ಯ. ಪ್ರಸಕ್ತ ಸಂದರ್ಭಗಳಲ್ಲಿ ವಿದ್ಯಾರ್ಥಿಗಳಿಗೆ ಕುಟುಂಬ ಸಂಬಂಧ, ಸಾಮಾಜಿಕ ಸೇವೆಗಳ ಕುರಿತು ಅರಿವು ಮೂಡಿಸುವುದರೊಂದಿಗೆ ಆನಂದದಾಯಕ ಕ್ಷಣಗಳನ್ನು ತಮ್ಮದಾಗಿಸುವ ಕಲೆ ತಿಳಿಸಿಕೊಡಬೇಕು ಎಂದು ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಅಧ್ಯಕ್ಷ ಜಯಚಂದ್ರ ಹತ್ವಾರ್ ಹೆಚ್. ನುಡಿದರು. ಅವರು ಹಿಂದೂ ವಿದ್ಯಾದಾಯಿನೀ ಸಂಘ(ರಿ) ಯ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಮತ್ತು ವಾಣಿಜ್ಯ ವಿಭಾಗಗಳ ಆಶ್ರಯದಲ್ಲಿ  ಮತ್ತು ಬಿ.ಎ.ಎಸ್.ಎಫ್, ಇಂಡಿಯಾ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಮೂರು ದಿನಗಳ ಹ್ಯಾಪಿನೆಸ್ ಫಾರ್ ಯೂತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾದ ಬಿ.ಎ.ಎಸ್.ಎಫ್. ಲಿಮಿಟೆಡ್‌ನ ಮಾನವ ಸಂಪನ್ಮೂಲ ವ್ಯವಸ್ಥಾಪಕ ಸಂತೋಷ್ ಪೈ ಮಾತನಾಡಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯ ಹಾಗೂ ಅನುಭವಾತ್ಮಕ ಪ್ರಕ್ರಿಯೆಗಳನ್ನು ತಿಳಿಸುವುದರೊಂದಿಗೆ ನಕರಾತ್ಮಕ ಚಿಂತನೆಗಳನ್ನು ಹೋಗಲಾಡಿಸಬೇಕಾಗಿದೆ. ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಕಾರ್ಯಗಳಿಗೆ ಸಂಸ್ಥೆಯು ಸದಾ ಬೆಂಬಲ ನೀಡುತ್ತಿದೆ ಎಂದರು.


ಬಿ.ಎ.ಎಸ್.ಎಫ್. ಲಿಮಿಟೆಡ್‌ನ ಪರಿಸರ ಮತ್ತು ಸುರಕ್ಷತಾ ವಿಭಾಗದ ಹಿರಿಯ ವ್ಯವಸ್ಥಾಪಕ ನಾಗರಾಜ್ ಮತ್ತು  ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ಶುಭ ಹಾರೈಸಿದರು.


ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ ಪಿ. ಮಾತನಾಡಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳನ್ನು ತಿಳಿಸುವುದರೊಂದಿಗೆ ಮಾನವೀಯ ಮೌಲ್ಯ, ನೈತಿಕ ಮೌಲ್ಯಗಳನ್ನು ತಿಳಿಸಿಕೊಡುವ ಹೊಣೆಗಾರಿಕೆ ಶಿಕ್ಷಣ ಸಂಸ್ಥೆಗಳಿಗಿವೆ ಎಂದರು. 


ಕರ್ನಾಟಕ ರಾಜ್ಯ ಪರಿಸರ ನಿಯಂತ್ರಣ ಮಂಡಳಿ, ಮಂಗಳೂರಿನ  ವಲಯ ಕಚೇರಿಯ ಹಿರಿಯ ಪರಿಸರ ಅಧಿಕಾರಿ ವಿಜಯ ಹೆಗ್ಡೆ ಆಶಯ ನುಡಿಗಳನ್ನಾಡಿದರು.  ಆರ್ಟ್ ಆಫ್ ಲಿವಿಂಗ್‌ನ ಹಿರಿಯ ತರಬೇತುದಾರರಾದ ದೀಪಿಕಾ ಭಟ್ ಮತ್ತು ಪ್ರಶಾಂತ್ ಪೈ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.


ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ. ಸ್ವಾಗತಿಸಿದರು. ಉಪನ್ಯಾಸಕಿ ಅಪೇಕ್ಷಾ ಭಂಡಾರಿ ವಂದಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು.


ಉಪಪ್ರಾಂಶುಪಾಲ ಪ್ರೊ. ನೀಲಪ್ಪ ವಿ., ಐಶೆ ಸಂಯೋಜಕ ಪ್ರೊ. ವಾಮನ ಕಾಮತ್, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ. ಭಾಗ್ಯಲಕ್ಷ್ಮೀ, ಗ್ರಂಥಪಾಲಕಿ ಡಾ ಸುಜಾತ ಬಿ. ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top