ಮಂಗಳೂರು: ಹುಬ್ಬಳ್ಳಿ-ಸಾಹಿತ್ಯ,ಲಲಿತಕಲಾ, ಸಾಮಾಜಿಕ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸಿದ ಗಣ್ಯರಿಗೆ ಕಚುಸಾಪ ಪ್ರತಿವರ್ಷ ನೀಡುವ ಪ್ರತಿಷ್ಠಿತ "ದಾಸೋಹಿ" ಪ್ರಶಸ್ತಿಗೆ ಈ ಸಲ ದಕ್ಷಿಣ ಕನ್ನಡ ಜಿಲ್ಲೆಯ ಕೊಡುಗೈ ದೊರೆ ಎಂದೆ ಖ್ಯಾತರಾದ ಧರ್ಮದರ್ಶಿ ಹರಿಕೃಷ್ಣ ಪುನರೂರ ಅವರನ್ನು ಆಯ್ಕೆ ಮಾಡಲಾಯಿತು ಎಂದು ಕಚುಸಾಪ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಸೆಪ್ಟೆಂಬರ್ 5ರಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಜರುಗಲಿರುವ ಕಚುಸಾಪ ರಾಜ್ಯ ಶಿಕ್ಷಕ ಸಾಹಿತಿಗಳ ಏಳನೆಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಪ್ರಸಾರಾಂಗ ನಿರ್ದೇಶಕ ಚನ್ನಬಸಪ್ಪ ಧಾರವಾಡಶೆಟ್ರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ