ರಾಷ್ಟ್ರಧ್ವಜಾರೋಹಣ: ನಿಯಮಗಳ ಪಾಲನೆಗೆ ಮನಪಾ ಆಯುಕ್ತರ ಸೂಚನೆ

Upayuktha
0


ಮಂಗಳೂರು: ಆಗಸ್ಟ್‌ 15 ರಂದು ದೇಶಾದ್ಯಂತ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುತ್ತಿದ್ದು, ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯೊಳಗೆ ಸಾರ್ವಜನಿಕ ಉದ್ಯಮ ಸ್ಸಂಘ ಸಂಸ್ಥೆಗಳು / ನಾಗರೀಕ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರು ವಿವಿಧ ಸ್ಥಳಗಳಲ್ಲಿ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸುವುದು ಸಂಪ್ರದಾಯವಾಗಿರುತ್ತದೆ.


ಸ್ವಾತಂತ್ರ್ಯದ ಸಂಭ್ರಮವನ್ನು ಭಾರತೀಯ ಧ್ವಜ ಸಂಹಿತೆ (The Flag code od of India) ಯ ಪ್ರಕಾರ ಬಟ್ಟೆಯಿಂದ ಮಾಡಿದ ರಾಷ್ಟ್ರ ಧ್ವಜಗಳನ್ನು ಮಾತ್ರ ಕಡ್ಡಾಯವಾಗಿ ಬಳಸುವಂತೆ ಮತ್ತು ರಾಷ್ಟ್ರ ಧ್ವಜಕ್ಕೆ ಅಪಮಾನ ಹಾಗೂ ಅಗೌರವ ತೋರದೆ ಧ್ವಾಜಾರೋಹಣವನ್ನು ಕೈಗೊಳ್ಳುವುದು. ಸೂರ್ಯೋದಯದ ಬಳಿಕ ಧ್ವಜವನ್ನು ಅರಳಿಬೇಕು ಹಾಗೂ ಸೂರ್ಯಾಸ್ತಮವಾಗುವ ಸಂದರ್ಭದಲ್ಲಿ ಧ್ವಜವನ್ನು ಧ್ವಜಸ್ಥಂಭದಿಂದ ಇಳಿಸಬೇಕು. ಯಾವುದೇ ಕಾರಣಕ್ಕೂ ರಾತ್ರಿ ಹೊತ್ತು ಧ್ವಜಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾರಾಡಬಾರದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈಗಾಗಲೇ ರಾಜ್ಯಾದಾದ್ಯಂತ ಪ್ಲಾಸ್ಟಿಕ್‌ ಬಾವುಟಗಳ ಉತ್ಪಾದನೆ, ಮಾರಾಟವನ್ನು ನಿಷೇಧಿಸಿರುವುದರಿಂದ ಮುಂಬರುವ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ನಿಂದ ತಯಾರಿಸಿದ ರಾಷ್ಟ್ರೀಯ ಧ್ವಜಗಳನ್ನು ಬಳಕೆ ಮಾಡದಂತೆ  ಹಾಗೂ ರಾಷ್ಟ್ರಧ್ವಜದ ಪ್ರಾಮುಖ್ಯತೆಯನ್ನು ಅರಿತು ಗೌರವಪೂರ್ವಕವಾಗಿ ಧ್ವಜಾರೋಹಣ ಮಾಡಿ ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಲು ಕೋರಲಾಗಿದೆ. ಖಾದಿ ಬಟ್ಟೆಯಿಂದ ಉತ್ಪಾದನೆಯಾಗುವ ರಾಷ್ಟ್ರ ಧ್ವಜದ ಬಳಕೆ ಮಾಡುವ ಬಗ್ಗೆ ವಿಶೇಷ ಒತ್ತು ನೀಡಲು ಹಾಗೂ ಭಾರತೀಯ ಧ್ವಜ ಸಂಹಿತೆಯಲ್ಲಿ ಯಾವುದೇ ಉಲ್ಲಂಘನೆ ಕಂಡು ಬಂದಲ್ಲಿ ಶಿಕ್ಷಾರ್ಹ ಅಪರಾಧವಾಗುವುದು ಎಂದು ತಿಳಿಸಲಾಗಿದೆ.


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top